ಬೆಂಗಳೂರು: ಕೊಲಂಬೊದಲ್ಲಿ ಭಾನುವಾರ ನಡೆದ ಮೊದಲ ಅಂಧ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ.
ಕೆಲ ದಿನಗಳ ಹಿಂದಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಖುಷಿ ಬೆನ್ನಲ್ಲೇ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಕೂಡ ತನ್ನ ಚೊಚ್ಚಲ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಂದು ಇತಿಹಾಸ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದು ದಾಖಲೆ ನಿರ್ಮಿಸಿದೆ. ಕೆಲ ದಿನಗಳ ಹಿಂದಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು.
ಶ್ರೀಲಂಕಾದ ಕೊಲಂಬೊದ ಪಿ ಸಾರಾ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ನೇಪಾಳ ತಂಡವು ನಿಗದಿತ 20 ಓವರ್‌ನಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿ ಭಾರತಕ್ಕೆ 115ರನ್‌ಗಳ ಗೆಲುವಿನ ಗುರಿ ನೀಡಿತು.
ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತ ತಂಡ ಮೊದಲ 10 ಓವರ್‌ಗಳಲ್ಲಿಯೇ ಶತಕದ ಗಡಿದಾಟ್ಟಿದ್ದರು. 12 ಓವರ್‌ಗಳಲ್ಲೇ ಮೂರು ವಿಕೆಟ್ ನಷ್ಟಕ್ಕೆ 117ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಅಂಧರ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.
ಈ ವಿಶೇಷ ಟೂರ್ನಿಯನ್ನು ಶ್ರೀಲಂಕಾ ಮತ್ತು ಭಾರತ ಜಂಟಿಯಾಗಿ ಆಯೋಜಿಸಿದ್ದವು. ಅಂಧರ ಕ್ರಿಕೆಟ್ ಅನ್ನು ಬಿಳಿ ಪ್ಲಾಸ್ಟಿಕ್ ಚೆಂಡಿನೊಂದಿಗೆ ಆಡಲಾಗುತ್ತದೆ. ಅದು ಉರುಳುವಾಗ ಗುಡುಗುವ ಬಾಲ್ ಬೇರಿಂಗ್‌ಗಳಿಂದ ತುಂಬಿರುತ್ತದೆ. ಇದು ಆಟಗಾರರಿಗೆ ಕೇಳಲು ಅನುವು ಮಾಡಿಕೊಡುತ್ತದೆ. ಈ ಶಬ್ಧ ಕೇಳಿಕೊಂಡು ಬ್ಯಾಟರ್ ಗಳು ಬ್ಯಾಟ್ ಬೀಸುತ್ತಾರೆ.