Select Your Language

Notifications

webdunia
webdunia
webdunia
webdunia

ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ
bengaluru , ಭಾನುವಾರ, 19 ಜೂನ್ 2022 (22:59 IST)

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 5ನೇ ಹಾಗೂ ಅಂತಿಮ ಟಿ-20 ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಈ ಮೂಲಕ 5 ಪಂದ್ಯಗಳ ಟಿ-20 ಸರಣಿ 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 3.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದ್ದಾಗ ಸುರಿದ ಮಳೆ ಅರ್ಧ ಗಂಟೆಯಾದರೂ ಸುರಿಯುತ್ತಲೇ ಇತ್ತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಇಶಾನ್ ಕಿಶನ್ 7 ಎಸೆತಗಳಲ್ಲಿ 2 ಸಿಕ್ಸರ್ ಸೇರಿದ 15 ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 1 ಬೌಂಡರಿ ಒಳಗೊಂಡ 10 ರನ್ ಬಾರಿಸಿ ಇಬ್ಬರೂ ನೆಗ್ಡಿಗೆ ವಿಕೆಟ್ ಒಪ್ಪಿಸಿದರು.

ದಕ್ಷಿಣ ಆಫ್ರಿಕಾ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದರೆ, ರಿಷಭ್ ಪಂತ್ ಸಾರಥ್ಯದ ಭಾರತ ತಂಡ ನಂತರದ ಎರಡೂ ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಜನರಿಗೆ ಟೀ, ಬನ್ಸ್ ವಿತರಿಸುತ್ತಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ!