Webdunia - Bharat's app for daily news and videos

Install App

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Sampriya
ಶನಿವಾರ, 7 ಜೂನ್ 2025 (14:02 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಕೆಟ್‌ಗಳು ಉರುಳುತ್ತಲೇ ಇದೆ. 

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ಎ.ಶಂಕರ್‌ ಹಾಗೂ ಖಜಾಂಚಿ ಇ.ಎಸ್‌. ಜೈರಾಮ್‌ ಅವರು ತಮ್ಮ ಹುದ್ದೆಗಳಿಗೆ ಶನಿವಾರ ಗುಡ್‌ಬೈ ಹೇಳಿದ್ದಾರೆ. 

ಅನಿರೀಕ್ಷಿತ ಹಾಗೂ ದುರದೃಷ್ಟಕರ ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿದ್ದರೂ, ನೈತಿಕ ಹೊಣೆ ಹೊತ್ತು ನಾವು ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಈ ಕುರಿತು ಸಂಸ್ಥೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ ಎಂದು ಉಲ್ಲೇಖಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಜೂನ್‌ 3ರಂದು ನಡೆದ ಫೈನಲ್‌ನಲ್ಲಿ 6 ರನ್‌ ಅಂತರದ ಜಯ ಸಾಧಿಸಿತ್ತು. ಹೀಗಾಗಿ, ದೇಶದಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮರುದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲು ಉದ್ದೇಶಿಸಿದ್ದ ಆರ್‌ಸಿಬಿ, ಮಧ್ಯಾಹ್ನ 3ಕ್ಕೆ ತಂಡದ ವಿಜಯೋತ್ಸವ ಮೆರವಣಿಗೆ ನಡೆಯಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿತ್ತು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಟಗಾರರಿಗೆ ಸನ್ಮಾನ ನಡೆಯುವುದು, ಪರೇಡ್‌ ನಡೆಯುವುದು ಹಾಗೂ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು. ಅಭಿಮಾನಿಗಳು ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments