ಮುಂಬೈ: ದೀಪ್ತಿ ಶರ್ಮಾ ಅವರ ಆಲ್ ರೌಂಡ್ ಆಟದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡಿಸ್ ವಿರುದ್ಧ ಇಂದು ನಡೆದ ಕೊನೆಯ ಮತ್ತು ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಹರ್ಮನ್ ಪ್ರೀತ್ ಬಳಗವು ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡು ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಕೊನೆಯ ಪಂದ್ಯದಲ್ಲು ಪಾರಮ್ಯ ಮೆರೆದು 3-0ಯಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ದೀಪ್ತಿ ಶರ್ಮಾ ಮತ್ತು ರೇಣುಕಾ ಸಿಂಗ್ ದಾಳಿಗೆ ತತ್ತರಿಸಿತು. ಇವರಿಬ್ಬರು ಕ್ರಮವಾಗಿ 6 ಮತ್ತು 4 ವಿಕೆಟ್ ಕಬಳಿಸಿದರು. ತಂಡವು 38.5ಓವರ್‌ಗಳಲ್ಲಿ 162ರನ್‌ಗಳಿಗೆ ಕುಸಿಯಿತು.
ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 28.2ಓವರ್‌ಗಳಲ್ಲಿ 5 ವಿಕೆಟ್‌ಗೆ 167ರನ್ ಗಳಿಸಿ ಜಯಭೇರಿ ಬಾರಿಸಿತು. ಬೌಲಿಂಗ್‌ನಲ್ಲಿ ಮಿಂಚಿದ್ದ ದೀಪ್ತಿ ಶರ್ಮಾ ಬ್ಯಾಟಿಂಗ್‌ನಲ್ಲು ಕಮಾಲ್ ಮಾಡಿದರು. ಅವರು ಅಜೇಯವಾಗಿ 39ರನ್ ಗಳಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು.