ಮುಂಬೈ: ಭಾರತ ಕ್ರಿಕೆಟ್ ತಂಡ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿಗೆ ವಿಚ್ಚೇಧನ ನೀಡಿದ್ದು ಗೊತ್ತೆ ಇದೆ. ಈಗ ಹೊಸ ಗೆಳತಿಯೊಂದಿಗೆ ಅವರು ಕಾಣಿಸಿಕೊಂಡಿದ್ದಾರೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ಮಹಿಕಾ ಶರ್ಮಾ ಜತೆಯಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಹಾರ್ದಿಕ್ ಪಾಂಡ್ಯ ಈಗ ಸುದ್ದಿಯಲ್ಲಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಅಧಿಕೃತ ಹೇಳಿಕೆ ನೀಡದಿದ್ದರೂ ಕೂಡ ಮೊದಲ ಬಾರಿಗೆ ಸಾರ್ವಜನಿಕವಾಗಿ ಈ ಜೋಡಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರು ರಿಲೇಶನ್‌ಶಿಪ್‌ನಲ್ಲಿ ಇದ್ದಾರೆ ಎನ್ನಲಾಗುತ್ತಿದೆ.
ಕಳೆದ ವರ್ಷ ನತಾಸಾ ಸ್ಟಾಂಕೋವಿಕ್‌ಗೆ ಪಾಂಡ್ಯ ವಿಚ್ಛೇದನ ನೀಡಿದ ಬಳಿಕ ಹೊಸ ಮಹಿಳಾ ಸಂಗಾತಿಯೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಇತ್ತೀಗೆಷ್ಟೇ ದುಬೈನಲ್ಲಿ ನಡೆದಿದ್ದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ವೇಳೆಯೂ ಮಹಿಕಾ ಶರ್ಮಾ ಹಾಜರಿದ್ದರು. ಅಲ್ಲದೆ ಮಹಿಕಾ ಶರ್ಮಾ ಮಾಡಿರುವ ಕೆಲವು ಇನ್‌ಸ್ಟಾಗ್ರಾಮ್ ಸ್ಟೋರಿ ಪೋಸ್ಟ್‌ನಲ್ಲಿ ಅವರ ಜತೆ ಹಾರ್ದಿಕ್ ಪಾಂಡ್ಯ ಕೂಡ ಇರುವುದು ಬೆಳಕಿಗೆ ಬಂದಿತ್ತು.
ಮಹೀಕಾ ಮಾಡೆಲ್ ಆಗಿದ್ದು, 2024ರ ಭಾರತೀಯ ಫ್ಯಾಷನ್ ಪ್ರಶಸ್ತಿಗಳಲ್ಲಿ ವರ್ಷದ ಮಾಡೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಹೀಕಾ ಹಲವಾರು ವರ್ಷಗಳಿಂದ ಕೆಲ ಸಂಗೀತ ವೀಡಿಯೊಗಳು, ಕಿರುಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೆಚ್ಚಾಗಿ ಬಿಕಿನಿ ಧರಿಸಿದ ಫೋಟೊ ಮತ್ತು ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ.