Webdunia - Bharat's app for daily news and videos

Install App

ಐಸಿಸಿ ಮಹಿಳಾ ವಿಶ್ವಕಪ್: ಭಾರತದ ವನಿತೆಯರಿಗೆ ಜಯಸಿಗಲಿ ಎಂದು ರಾಜೇಶ್ವರಿ ತವರಲ್ಲಿ ಪ್ರಾರ್ಥನೆ

Webdunia
ಭಾನುವಾರ, 23 ಜುಲೈ 2017 (02:28 IST)
ವಿಜಯಪುರ:ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿರುವ ಭಾರತದ ವನಿತೆಯರು  ವಿಶ್ವಕಪ್ ಫೈನಲ್ ಪ್ರವೇಶಿಸಿದ್ದಾರೆ. ಇಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತದ ವನಿತೆಯರು ಜಯಶಾಲಿಗಳಾಗಲಿ ಎಂದು ರಾಜೇಶ್ವರಿ ಗಾಯಕವಾಡ್‌ ತವರೂರು ವಿಜಯಪುರ ಜಿಲ್ಲೆಯ ಜನತೆ ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆ.

ರಾಜೇಶ್ವರಿ ಗಾಯಕವಾಡ್‌ ವ್ಯಾಸಂಗ ನಡೆಸಿದ ಬಿಡಿಇ ಸೊಸೈಟಿಯ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂತಿಮ ಬಿಎ ವ್ಯಾಸಂಗ ನಡೆಸುತ್ತಿರುವ ಬಿಎಲ್‌ಡಿಇ ಸಂಸ್ಥೆಯ ಬಂಗಾರೆಮ್ಮ ಸಜ್ಜನ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ರಾಜೇಶ್ವರಿ ಉತ್ತಮ ಆಟವಾಡಲೆಂದು  ಶಾಲಾ–ಕಾಲೇಜಿನಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು.
 
19 ವರ್ಷದೊಳಗಿನ ಮಹಿಳಾ ಕ್ರಿಕೆಟ್‌ನಲ್ಲಿ ಉತ್ತಮ ಆಟವಾಡಿದ್ದ ಅವರು 2007ರಲ್ಲಿ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದರು. 2009ರಲ್ಲಿ ರಾಷ್ಟ್ರೀಯ ಟ್ವೆಂಟಿ–20 ಟೂರ್ನಿಯಲ್ಲಿ ಆಡಿದ್ದರು. 2014ರ ಜನವರಿಯಲ್ಲಿ ರಾಂಚಿಯಲ್ಲಿ ನಡೆದ ಚಾಲೆಂಜರ್ ಟ್ರೋಫಿಯಲ್ಲಿ ಇಂಡಿಯಾ ಬ್ಲ್ಯೂ ತಂಡದಲ್ಲಿ ಆಡಿದ್ದರು. ಬೆಂಗಳೂರಿನಲ್ಲಿ ನ್ಯೂಜಿಲೆಂಡ್‌ ವಿರುದ್ಧ 2015ರ ಜೂನ್ 28ರಂದು ನಡೆದ ಏಕದಿನ ಪಂದ್ಯದಲ್ಲಿ ಅಂತರರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಒಟ್ಟಿನಲ್ಲಿ ತಮ್ಮೂರಿನ ಹುಡುಗಿ ಅಂತಿಮ ಪಂದ್ಯದಲ್ಲೂ ಅಮೋಘ ಆಟವಾಡಲಿ, ದೇಶಕ್ಕೆ ಕೀರ್ತಿ ತರಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

Virat Kohli retirement: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿದಾಯ ಪಂದ್ಯವನ್ನೂ ನೀಡದೇ ಗೇಟ್ ಪಾಸ್

Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕೆ ಕ್ಯೂನಲ್ಲಿ ನಿಂತಿರುವ ಟೀಂ ಇಂಡಿಯಾ ಕ್ರಿಕೆಟಿಗರು

Virat Kohli: ಪತಿ ನಿವೃತ್ತಿ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿದ ಅನುಷ್ಕಾ ಶರ್ಮಾ

Virat Kohli: ಟೆಸ್ಟ್‌ಗೆ ವಿದಾಯ ಘೋಷಿಸುವ ಕೆಲ ಕ್ಷಣಗಳ ಮುಂಚೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments