Publish Date: Sat, 30 Apr 2022 (15:32 IST)
Updated Date: Sat, 30 Apr 2022 (15:34 IST)
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಇದು 100ನೇ ಐಪಿಎಲ್ ಪಂದ್ಯವಾಗಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತನ್ನ ಸ್ಥಾನ ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ ಸತತ ಸೋಲು ಕಾಣುತ್ತಿರುವ ಆರ್ ಸಿಬಿ ಮತ್ತೆ ಗೆಲುವಿನ ಲಯ ಕಂಡುಕೊಳ್ಳುವ ಗುರಿ ಹೊಂದಿದೆ.