ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

Sampriya
ಶುಕ್ರವಾರ, 24 ಅಕ್ಟೋಬರ್ 2025 (14:15 IST)
Photo Credit X
ನವದೆಹಲಿ: ಜಾವೆಲಿನ್ ಥ್ರೋ ತಾರೆ ಹಾಗೂ ಒಲಿಪಿಂಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಭಾರತೀಯ ಸೇನೆಯ ಮೀಸಲು ಘಟಕವಾದ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಆಗಿ  ಸೇರ್ಪಡೆಯಾಗಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ದೆಹಲಿಯ ತಮ್ಮ ಕಚೇರಿಯಲ್ಲಿ ನೀರಜ್ ಚೋಪ್ರಾರಿಗೆ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಲಾಂಛನ ತೊಡಿಸಿ, ಅಭಿನಂದಿಸಿದರು. ಭಾರತೀಯ ಸೇನೆಯ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹಾಜರಿದ್ದರು.

2020ರ ಟೋಕಿಯೊ ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದರು. ಅವರು ಪರಮ ವಿಶಿಷ್ಟ ಸೇವಾ ಪದಕ, ಪದ್ಮಶ್ರೀ ಹಾಗೂ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ನೀರಜ್ ಚೋಪ್ರಾ ಭಾರತದ ಅತ್ಯುತ್ತಮ ಕ್ರೀಡಾಪಟುವಾಗಿದ್ದು, ಅವರ ನಿರಂತರ ಪರಿಶ್ರಮ, ದೇಶಭಕ್ತಿಯು ಭಾರತೀಯ ಮನೋಭಾವದ ಸಂಕೇತ. ಭವಿಷ್ಯದಲ್ಲಿ ಅವರ ಎಲ್ಲ ಪ್ರಯತ್ನಗಳಿಗೂ ಯಶಸ್ಸು ಲಭಿಸಲಿ ಎಂದು ರಾಜನಾಥ್ ಸಿಂಗ್ ಶುಭ ಹಾರೈಸಿದ್ದಾರೆ.

ಕ್ರಿಕೆಟಿಗ ಎಂ.ಎಸ್.ಧೋನಿ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಕರ್ನಾಟಕ ಕೇಡರ್ ನ ಹಿರಿಯ ಐಪಿಎಸ್ ಅಧಿಕಾರಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಖ್ಯಾತನಾಮರು ಟೆರಿಟೋರಿಯಲ್ ಆರ್ಮಿಯ ಸದಸ್ಯರಾಗಿ ಸೇರ್ಪಡೆಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments