Webdunia - Bharat's app for daily news and videos

Install App

ಕೆಎಲ್ ರಾಹುಲ್ ಭಾರತ ಟಿ-20 ತಂಡದ ನಾಯಕ: ದಿನೇಶ್, ಹಾರ್ದಿಕ್ ವಾಪಸ್!

Webdunia
ಭಾನುವಾರ, 22 ಮೇ 2022 (20:32 IST)
ಕರ್ನಾಟಕದ ಕೆಎಲ್ ರಾಹುಲ್ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಭಾನುವಾರ 18 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ ಹಾಗೂ ಮೊಹಮದ್ ಶಮಿ ಮುಂತಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.
ಕೆಎಲ್ ರಾಹುಲ್ ಗೆ ನಾಯಕತ್ವ ಲಭಿಸಿದೆ. ಅಲ್ಲದೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡಕ್ಕೆ ಮರಳಿದ್ದಾರೆ.
ಮಧ್ಯಮ ವೇಗಿಗಳಾದ ಆರ್ಷದ್ ದೀಪ್ ಸಿಂಗ್ ಮತ್ತು ವೇಗದ ದಾಳಿಯಲ್ಲಿ ಗಮನ ಸೆಳೆಯುತ್ತಿರುವ ಉಮ್ರಾನ್ ಮಲಿಕ್ ಇದೇ ಮೊದಲ ಬಾರಿಗೆ ಭಾರತ ತಂಡದ ಬಾಗಿಲು ತೆರೆದಿದೆ.
ಉಳಿದಂತೆ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್ ಮತ್ತು ಋತುರಾಜ್ ಗಾಯಕ್ವಾಡ್ ಸ್ಥಾನ ಉಳಿಸಿಕೊಂಡಿದ್ದಾರೆ.
ಭಾರತ ಟಿ-20 ತಂಡ: ಕೆಎಲ್ ರಾಹುಲ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಇಶನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುರ್ವೆಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯಿ, ಭುವೇಶ್ವ್ರ್ ಕುಮಾರ್, ಹರ್ಷಲ್ ಪಟೇಲ್, ಅವಿಶ್ ಖಾನ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments