Webdunia - Bharat's app for daily news and videos

Install App

ಮೊದಲ ಎಸೆತದಲ್ಲೇ ಭಾರತಕ್ಕೆ ಚಿನ್ನದ ಭರವಸೆ ಕೊಟ್ಟ ನೀರಜ್ ಚೋಪ್ರಾ

Sampriya
ಮಂಗಳವಾರ, 6 ಆಗಸ್ಟ್ 2024 (16:09 IST)
Photo Courtesy X
ಪ್ಯಾರಿಸ್‌:ಇಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಸ್ಪರ್ಧಾ ಕಣಕ್ಕೆ ಇಳಿದಿದ್ದು, ಮೊದಲ ಎಸೆತದಲ್ಲೇ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

ಮಂಗಳವಾರ ನಡೆದ ಕ್ವಾಲಿಫಿಕೇಷನ್‌ ಸ್ಪರ್ಧೆಯಲ್ಲಿ ಹಾಲಿ ಚಾಂಪಿಯನ್ ನೀರಜ್ ಚೋಪ್ರಾ ಈ ಋತುವಿನ ಶ್ರೇಷ್ಠಾ ಸಾಧನೆ ತೋರಿದರು. ಅವರು ಮೊದಲ ಎಸೆತದಲ್ಲೇ  89.34 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

26ವರ್ಷದ ನೀರಜ್ ಚೋಪ್ರಾ ಅವರು ಬಿ ಗ್ರೂಪ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಕೊನೆಯವರೆಗೂ ಯಶಸ್ವಿಯಾದರು. ಹೀಗಾಗಿ ಭಾರತಕ್ಕೆ ಚಿನ್ನದ ಪದಕದ ಭರವಸೆಯನ್ನು ಮೊದಲ ಎಸೆತದಲ್ಲೇ ನೀಡಿದರು.

ಇದು ನೀರಜ್‌ ಚೋಪ್ರಾ ಅವರ ವರ್ಷದ ಬೆಸ್ಟ್‌ ಥ್ರೋ ಆಗಿದೆ. ಇದನ್ನೂ ಮುನ್ನ ದೋಹಾ ಡೈಮಂಡ್‌ ಲೀಗ್‌ನಲ್ಲಿ 88.36 ಮೀಟರ್‌ ದೂರ ಜಾವೆಲಿನ್‌ ಎಸೆದಿದ್ದು ಅವರ ಶ್ರೇಷ್ಠ ಥ್ರೋ ಆಗಿತ್ತು.

ಇದಕ್ಕೂ ಮುನ್ನಾಗ್ರೂಪ್‌ ಎ ವಿಭಾಗದ ಅರ್ಹತಾ ಹಂತದಲ್ಲಿ ಸ್ಪರ್ಧೆ ಮಾಡಿದ್ದ ಭಾರತದ ಮತ್ತೊಬ್ಬ ಸ್ಪರ್ಧಿ ಕಿಶೋರ್‌ ಜೆನಾ 9ನೇ ಸ್ಥಾನ ಪಡೆದುಕೊಂಡು ಫೈನಲ್‌ಗೇರಲು ವಿಫಲರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments