Select Your Language

Notifications

webdunia
webdunia
webdunia
webdunia

ಮ್ಯಾಚ್ ವೇಳೆ ಉದ್ದೀಪನಾ ಮದ್ದು ಸೇವಿಸಿದ್ದ ಟೀಂ ಇಂಡಿಯಾ ಆಟಗಾರ

ಮ್ಯಾಚ್ ವೇಳೆ ಉದ್ದೀಪನಾ ಮದ್ದು ಸೇವಿಸಿದ್ದ ಟೀಂ ಇಂಡಿಯಾ ಆಟಗಾರ
ನವದೆಹಲಿ , ಶುಕ್ರವಾರ, 27 ಅಕ್ಟೋಬರ್ 2017 (16:17 IST)
ನವದೆಹಲಿ:  ಬಿಸಿಸಿಐನಿಂದ ಮಾನ್ಯತೆ ಪಡೆದಿರುವ ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗನ ಮೇಲೆ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಆರೋಪ ಕೇಳಿ ಬಂದಿದೆ.
      ಸಾಂದರ್ಭಿಕ ಚಿತ್ರ

ವಾಡಾ 2016ನೇ ಸಾಲಿನ ವರದಿಯಲ್ಲಿ ಈ ಮಾಹಿತಿ ಬಹಿರಂಗ ಮಾಡಿದೆ. 153 ಆಟಗಾರರನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ ಒಬ್ಬರು ಮಾತ್ರ ನಿಷೇಧಿತ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿದೆ. ಆದರೆ ಆಟಗಾರನ ಹೆಸರನ್ನು ಬಹಿರಂಗ ಮಾಡಲಿಲ್ಲ.

2013ರ ಐಪಿಎಲ್ ಆವೃತ್ತಿ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರನಾಗಿದ್ದ ಪ್ರದೀಪ್ ಸಾಂಗ್ವಾನ್ ಡೋಪಿಂಗ್ ಸುಳಿಯಲ್ಲಿ ಸಿಲುಕಿದ್ದರು. ಇದಾದ ಬಳಿಕ ಇದೀಗ ಮತ್ತೋರ್ವ ಭಾರತೀಯ ಆಟಗಾರನ ವಿರುದ್ಧ ಈ ಆರೋಪ ಕೇಳಿ ಬಂದಿದ್ದು ಆತನ ಹೆಸರನ್ನು ಇನ್ನು ಬಹಿರಂಗಪಡಿಸಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾಚ್ ಫಿಕ್ಸಿಂಗ್ ಬಗ್ಗೆ ಧೋನಿ ಹೇಳಿದ್ದೇನು?