Webdunia - Bharat's app for daily news and videos

Install App

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಅಮನ್ ಸೆಹ್ರಾವತ್ ಗೆ ಈ ಹತ್ಯೆ ಆರೋಪಿಯೇ ಗುರು

Krishnaveni K
ಶನಿವಾರ, 10 ಆಗಸ್ಟ್ 2024 (11:06 IST)
Photo Credit: Facebook
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಈ ಬಾರಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಅಮನ್ ಸೆಹ್ರಾವತ್ ಗೆ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಗುರು. ಮೊದಲ ಒಲಿಂಪಿಕ್ಸ್ ನಲ್ಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಅಮನ್ ಗುರುವಿಗೆ ತಕ್ಕ ಶಿಷ್ಯನೆನಿಸಿಕೊಂಡಿದ್ದಾರೆ.

21 ವರ್ಷದ ಅಮನ್ 57 ಕೆಜಿ ವಿಭಾಗದ ಕುಸ್ತಿಯಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಅತೀ ಕಿರಿಯ ವಯಸ್ಸಿನಲ್ಲಿ ಪದಕ ಗೆದ್ದ ದಾಖಲೆ ಮಾಡಿದ್ದಾರೆ. ಇದು ಅವರ ಮೊದಲ ಒಲಿಂಪಿಕ್ಸ್ ಎನ್ನುವುದು ಇನ್ನೊಂದು ವಿಶೇಷ. ಕುಸ್ತಿಪಟುಗಳ ತವರು ಹರ್ಯಾಣದಿಂದ ಬಂದವರು ಅಮನ್.

ಅಮನ್ ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ತಮ್ಮ ಗುರು ಎಂದು ಪರಿಗಣಿಸಿದ್ದಾರೆ. ಅವರ ಸ್ಪೂರ್ತಿಯಿಂದಲೇ ಕುಸ್ತಿ ಅಖಾಡಕ್ಕಿಳಿದವರು. ಭಾರತಕ್ಕೆ ಎರಡು ಬಾರಿ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟಿದ್ದ ಸುಶೀಲ್ ಕುಮಾರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದವರು.

ಚಿಕ್ಕಂದಿನಲ್ಲೇ ಅಮನ್ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೆ. ಆದರೆ ಚಿಕ್ಕಂದಿನಲ್ಲೇ ತಮ್ಮ ಮಗ ಕುಸ್ತಿಪಟುವಾಗಬೇಕು ಎಂಬುದು ಅವರ ತಂದೆ-ತಾಯಿಯ ಕನಸಾಗಿತ್ತಂತೆ. ಇಂದು ಪದಕ ಗೆಲ್ಲುವ ಮೂಲಕ ತಂದೆ-ತಾಯಿಯ ಕನಸನ್ನೂ ನನಸು ಮಾಡಿದ್ದಾರೆ.  ಭಾರತಕ್ಕೆ ಘಟಾನುಘಟಿ ಕುಸ್ತಿಪಟುಗಳನ್ನು ನೀಡಿದ ಛತ್ರಶಾಲಾ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಾ ಬಂದ ಅಮನ್ ತಾವೂ ಕೂಡಾ ಕುಸ್ತಿ ಅಖಾಡದ ಹೆಸರು ಮತ್ತಷ್ಟು ಹೆಚ್ಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments