Select Your Language

Notifications

webdunia
webdunia
webdunia
webdunia

Sania Mirza: ಆಪರೇಷನ್ ಸಿಂದೂರ ಬಗ್ಗೆ ಪಾಕಿಸ್ತಾನ ಮಾಜಿ ಸೊಸೆ ಸಾನಿಯಾ ಮಿರ್ಜಾ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

Sania Mirza

Krishnaveni K

ಹೈದರಾಬಾದ್ , ಗುರುವಾರ, 8 ಮೇ 2025 (12:27 IST)
ಹೈದರಾಬಾದ್: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ಘಟನೆ ಬಗ್ಗೆ ಪಾಕಿಸ್ತಾನದ ಮಾಜಿ ಸೊಸೆ ಸಾನಿಯಾ ಮಿರ್ಜಾ ಪ್ರತಿಕ್ರಿಯೆ ಏನಿತ್ತು ಗೊತ್ತಾ?

ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಈ ಹಿಂದೆ ಪಾಕಿಸ್ತಾನ ಮೂಲದ ಕ್ರಿಕೆಟಿಗ ಶೊಯೇಬ್ ಮಲಿಕ್ ಪತ್ನಿಯಾಗಿದ್ದರು. ಆದರೆ ದಂಪತಿ ಈಗ ವಿಚ್ಛೇದನ ಪಡೆದಿದ್ದಾರೆ. ಇದೀಗ ಆಪರೇಷನ್ ಸಿಂದೂರ ಬಗ್ಗೆ ಸಾನಿಯಾ ಮಿರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಆಪರೇಷನ್ ಸಿಂದೂರ ಬಳಿಕ ಭಾರತೀಯ ಸೇನೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಕೂರಿಸಿಕೊಂಡು ದಾಳಿ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಕರೆದಿತ್ತು. ಈ ಫೋಟೋಗಳನ್ನು ಹಂಚಿಕೊಂಡಿರುವ ಸಾನಿಯಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಈ ಫೋಟೋಗಳೇ ದಾಳಿಯ ವಿಶೇಷತೆ ಬಗ್ಗೆ ಸಾರಿ ಹೇಳುತ್ತದೆ ಎಂದಿದ್ದಾರೆ. ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ಉಗ್ರರು ಮಹಿಳೆಯರ ಸಿಂದೂರ ಅಳಿಸಿದ್ದರು. ಅದಕ್ಕೆಂದೇ ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿತ್ತು. ಇದನ್ನು ಸಾನಿಯಾ ಮಿರ್ಜಾ ಕೊಂಡಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

IPL 2025 RCB: 12 ವರ್ಷದ ಬಳಿಕ ಆರ್ ಸಿಬಿಗೆ ಬಂದ ಅಪ್ಪಟ ಕನ್ನಡಿಗ ಆಟಗಾರ