ಶ್ರೇಯಸ್ ಅಯ್ಯರ್ ಭರ್ಜರಿ ಕಮ್‌ಬ್ಯಾಕ್‌!

Webdunia
ಗುರುವಾರ, 25 ನವೆಂಬರ್ 2021 (17:33 IST)
ಕಾನ್ಪುರ : ಆಸ್ಪತ್ರೆ ಬೆಡ್ನಿಂದ ಎದ್ದು ಈಗ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿ ಮಿಂಚಲು ಶ್ರೇಯಸ್ ಅಯ್ಯರ್ ದಿಟ್ಟ ಹೆಜ್ಜೆಯನ್ನೇ ಇಟ್ಟಿದ್ದಾರೆ.
ಕಳೆದ ಮಾರ್ಚ್ನಲ್ಲಿ ಇಂಗ್ಲೆಂಡ್ ವಿರುದ್ಧದ ಒಡಿಐ ಸರಣಿ ವೇಳೆ ಫೀಲ್ಡಿಂಗ್ ಸಮಯ ಭುಜದ ಮೂಳೆ ಮುರಿದುಕೊಂಡ ಶ್ರೇಯಸ್ ಅಯ್ಯರ್ ಅವರ ವೃತ್ತಿಬದುಕು ಅಲ್ಲೋಲ ಕಲ್ಲೋವೇ ಆಗಿತ್ತು.
ಇದೇ ಗಾಯದ ಸಮಸ್ಯೆ ಕಾರಣ ಅವರು ಐಪಿಎಲ್ 2021 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನೂ ಕಳೆದುಕೊಳ್ಳುವಂತ್ತಾಗಿ, ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲೂ ಅವಕಾಶ ಪಡೆಯದೇ ಹೋದರು. ಐಪಿಎಲ್ 2021 ಟೂರ್ನಿಯ 2ನೇ ಚರಣದ ಮೂಲಕ ವೃತ್ತಿಪರ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿರುವ ಶ್ರೇಯಸ್ ದಿಟ್ಟ ನಡೆಯಲ್ಲಿ ಸಾಗಿದ್ದಾರೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕಾನ್ಪುರದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಪಡೆದ 26 ವರ್ಷದ ಬಲಗೈ ಬ್ಯಾಟ್ಸ್ಮನ್ ಪದಾರ್ಪಣೆಯ ಪಂದ್ಯದಲ್ಲೇ ಶತಕದತ್ತ ದಾಪುಗಾಲಿಟ್ಟಿದ್ದಾರೆ. ಭಾರತ ಟೆಸ್ಟ್ ತಂಡದ ಪರ ಆಡಿದ 303ನೇ ಆಟಗಾರ ಎನಿಸಿಕೊಂಡ ಶ್ರೇಯಸ್, ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನವಾದ ಗುರುವಾರ 136 ಎಸೆತಗಳಲ್ಲಿ 7 ಫೋರ್ ಮತ್ತು 2 ಸಿಕ್ಸರ್ಗಳೊಂದಿಗೆ ಅಜೇಯ 75 ರನ್ ಬಾರಿಸಿ ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಮೇಲೆತ್ತಿ ಬೃಹತ್ ಮೊತ್ತದ ಕಡೆಗೆ ಕೊಂಡೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments