ಜಪಾನ್ ರಾಜಧಾನಿ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾನುವಾರ ನಡೆದ ಡಿಸ್ಕಸ್ ಎಸೆತ ಸ್ಪರ್ಧೆಯ ಎಫ್ 56 ವಿಭಾಗ ಕೇವಲ ಭುಜ ಬಲದ ಆಧಾರದ ಮೇಲೆ ನಡೆಯುತ್ತದೆ. ಆದರೆ ಕಾಲುಗಳ ಚಲನೆಯಲ್ಲಿ ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚು ವಿಸ್ತರಿಸಿದ ಹಿನ್ನೆಲೆಯಲ್ಲಿ ವಿನೋದ್ ಕುಮಾರ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ.
ವಿನೋದ್ ಕುಮಾರ್ ಬಿಎಸ್ ಎಫ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ದಶಕದಷ್ಟು ಸಮಯ ಹಾಸಿಗೆಯಲ್ಲಿದ್ದರು. ಅವರ ತಂದೆ ಕೂಡ ಭಾರತೀಯ ಸೇನೆಯಲ್ಲಿದ್ದು, 1971ರ ಭಾರತ-ಪಾಕ್ ಯುದ್ಧದಲ್ಲಿ ಪಾಲ್ಗೊಂಡಿದ್ದರು. ವಿನೋದ್ ಕುಮಾರ್ 19.91 ಮೀ.ದೂರ ದಾಖಲಿಸಿ ಕಂಚಿನ ಪದಕ ಗೆದ್ದಿದ್ದರು.