Publish Date: Wed, 22 Jul 2026 (21:54 IST)
Updated Date: Wed, 22 Jul 2026 (21:56 IST)
ಮುಂಬೈ: ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಉತ್ತರ ಪ್ರದೇಶದ ವೃಂದಾವನಕ್ಕೆ ಇಂದು ಭೇಟಿ ನೀಡಿದ್ದಾರೆ.
ವೃಂದಾವನದಲ್ಲಿರುವ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ತೆರಳಿದ ಈ ಜೋಡಿ, ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದರು. ಗುರು ಪೂರ್ಣಿಮಾ ಮಹೋತ್ಸವದ ಪ್ರಯುಕ್ತ ಅವರು ಕಾಲಿಗೆ ಚಪ್ಪಲಿ ಧರಿಸದೆ, ಮಾಸ್ಕ್ ಧರಿಸಿ ಸರಳವಾಗಿ ಆಶ್ರಮಕ್ಕೆ ಭೇಟಿ ನೀಡಿದ್ದರು.
ಇತ್ತೀಚಿನ ವರ್ಷಗಳಲ್ಲಿ ಆಗಾಗ್ಗೆ ಆಧ್ಯಾತ್ಮಿಕ ಪ್ರಯಾಣ ಕೈಗೊಳ್ಳುತ್ತಿರುವ ವಿರುಷ್ಕಾ, ಮತ್ತೊಮ್ಮೆ ಆಶ್ರಮ ತಲುಪಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಇಂದು ವೈರಲ್ ಆಗಿರುವ ಫೋಟೋ, ವಿಡಿಯೋಗಳಲ್ಲಿ ದಂಪತಿ ಬಹಳ ಸರಳವಾಗಿ ಕಾಣಿಸಿಕೊಂಡಿದ್ದಾರೆ.
ಫೇಸ್ ಮಾಸ್ಕ್ ಧರಿಸಿದ್ದ ಜೋಡಿ, ಜನಸಾಮಾನ್ಯರ ನಡುವೆ ಸಾಮಾನ್ಯರಂತೆ ಸಾಗುತ್ತಿರುವ ವಿಡಿಯೋಗಳು ನೆಟ್ಟಿಗರ ಗಮನ ಸೆಳೆದಿವೆ. ಸೋಷಿಯಲ್ ಮೀಡಿಯಾದಲ್ಲಿ ದಂಪತಿ ಮೇಲೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆದಿದ್ದಾರೆ. ಜೊತೆಗೆ ಸದ್ಯ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದೂ ಕೆಲವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ