ಭಾರತಕ್ಕೆ ಬಂದ ವಿನೇಶ್ ಫೋಗಟ್ ಗೆ ಕುಸ್ತಿ ಸ್ನೇಹಿತರಿಂದ ಭರ್ಜರಿ ಸ್ವಾಗತ (Video)

Krishnaveni K
ಶನಿವಾರ, 17 ಆಗಸ್ಟ್ 2024 (11:46 IST)
ನವದೆಹಲಿ: ಇತ್ತಿಚೆಗೆ ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿಯೂ ತೂಕ ಸಮಸ್ಯೆಯಿಂದಾಗಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಭಾರತಕ್ಕೆ ಬಂದಿಳಿದಿದ್ದಾರೆ. ಅವರನ್ನು ಕುಸ್ತಿ ಸ್ನೇಹಿತರು, ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ವಿನೇಶ್ ರನ್ನು ಅನರ್ಹಗೊಳಿಸಿದ್ದರಿಂದ ಕನಿಷ್ಠ ಅವರಿಗೆ ಬೆಳ್ಳಿ ಪದಕವನ್ನಾದರೂ ನೀಡಿ ಎಂದು ಅಂತಾರಾಷ್ಟ್ರೀಯ ಕ್ರೀಡಾ ಪ್ರಾಧಿಕಾರಕ್ಕೆ ಭಾರತ ಮೇಲ್ಮನವಿ ಸಲ್ಲಿಸಿತ್ತು. ಆದರೆ ಇದರ ವಿಚಾರಣೆ ನಡೆದು ವಿನೇಶ್ ಮನವಿ ತಿರಸ್ಕೃತವಾಗಿತ್ತು. ಇದರ ಬೆನ್ನಲ್ಲೇ ನಿರಾಸೆಯಿಂದಲೇ ವಿನೇಶ್ ಪ್ಯಾರಿಸ್ ನಿಂದ ನಿರ್ಗಮಿಸಿದ್ದರು.

ಇದೀಗ ನವದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿನೇಶ್ ರನ್ನು ಅವರ ಕುಸ್ತಿ ಪಟು ಸ್ನೇಹಿತರಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಅಪಾರ ಸಂಖ್ಯೆ ಯ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಅನರ್ಹತೆಯಿಂದಾಗಿ ಪದಕ ಗೆಲ್ಲದೇ ಇದ್ದರೂ ವಿನೇಶ್ ಗೆ ಪದಕ ಗೆದ್ದಷ್ಟೇ ಗೌರವ ಸಿಕ್ಕಿದೆ.

ಈ ಹಿಂದೆ ಕುಸ್ತಿ ಫೆಡರೇಷನ್ ವಿರುದ್ಧದ ಹೋರಾಟದಲ್ಲಿ ವಿನೇಶ್, ಸಾಕ್ಷಿ ಮಲಿಕ್, ಬಜರಖಗ್ ಪೂನಿಯಾ ಜೊತೆಗಿದ್ದರು. ಇದೀಗ ವಿನೇಶ್ ಭಾರತಕ್ಕೆ ಬಂದ ಬೆನ್ನಲ್ಲೇ  ಈ ಕುಸ್ತಿಪಟುಗಳು ಆಕೆಯನ್ನು ಬರಮಾಡಿಕೊಂಡಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದು ಅವರೆಲ್ಲರೂ ಚಾಂಪಿಯನ್ ಎಂದು ಕೂಗುವ ಮೂಲಕ ವಿನೇಶ್ ಗೆ ಪದಕ ಗೆಲ್ಲಲು ಸಾಧ್ಯವಾಗದೇ ಇರುವ ನೋವು ಮರೆಸುವ ಯತ್ನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments