Webdunia - Bharat's app for daily news and videos

Install App

ಇಂಗ್ಲೆಂಡ್‌ ಟೆಸ್ಟ್‌ ಗೆ ವಿರಾಟ್ ಕೊಹ್ಲಿ ಮತ್ತೆ ನಾಯಕ?

Webdunia
ಮಂಗಳವಾರ, 28 ಜೂನ್ 2022 (21:08 IST)
ಶುಕ್ರವಾರ ಆರಂಭಗೊಳ್ಳಲಿರುವ ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ಮತ್ತೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ಭಾರತ ಮತ್ತು ಇಂಗ್ಲೆಂಡ್‌ ನಡುವಣ ೫ ಪಂದ್ಯಗಳ ಟೆಸ್ಟ್‌ ಸರಣಿ ೨-೨ರಿಂದ ಸಮಬಲಗೊಂಡಿದೆ. ಕೊನೆಯ ಪಂದ್ಯ ಕೊರೊನಾ ವೈರಸ್‌ ಅಬ್ಬರದಿಂದ ಮುಂದೂಡಲಾಗಿತ್ತು. ಬಾಕಿ ಉಳಿದ ಒಂದು ಪಂದ್ಯ ಉಭಯ ತಂಡಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಸರಣಿ ಗೆಲುವು ನಿರ್ಧಾರವಾಗಲಿದೆ.
ಎಡ್ಜ್‌ ಬಸ್ಟನ್‌ ನಲ್ಲಿ ಶುಕ್ರವಾರ ಆರಂಭಗೊಳ್ಳಲಿರುವ ಈ ಪಂದ್ಯದಲ್ಲಿ ಭಾರತ ತಂಡ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲೂ ನಾಯಕ ರೋಹಿತ್‌ ಶರ್ಮ ಕೊರೊನಾ ವೈರಸ್‌ ಸೋಂಕಿನಿಂದ ಬಳಲುತ್ತಿರುವುದರಿಂದ ಅವರು ಚೇತರಿಸಿಕೊಳ್ಳುವ ಬಗ್ಗೆ ಅನುಮಾನವಿದೆ.
ರೋಹಿತ್‌ ಶರ್ಮ ಒಂದು ವೇಳೆ ಆಡದೇ ಇದ್ದರೆ ತಂಡವನ್ನು ಮುನ್ನಡೆಸುವುದು ಯಾರು? ಆರಂಭಿಕನಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಕಾಡತೊಡಗಿದೆ.
ಹಂಗಾಮಿ ನಾಯಕರಾದ ಕೆಎಲ್‌ ರಾಹುಲ್‌ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ. ರಿಷಭ್‌ ಪಂತ್‌ ಟಿ-೨೦ಗೆ ಅಷ್ಟೇ ಸೀಮಿತರಾಗಿದ್ದಾರೆ. ಹಾಗಾಗಿ ಹಿಂದಿನ ಇಂಗ್ಲೆಂಡ್‌ ಸರಣಿಯನ್ನು ಮುನ್ನಡೆಸಿದ್ದ ವಿರಾಟ್‌ ಕೊಹ್ಲಿ ಮತ್ತೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ಇದೇ ವೇಳೆ ಆರಂಭಿಕನಾಗಿ ಮಯಾಂಕ್‌ ಅಗರ್‌ ವಾಲ್‌ ತಂಡವನ್ನು ಸೇರಿಕೊಂಡಿದ್ದು, ಮಯಾಂಕ್‌ ಅಲ್ಲದೇ, ಚೇತೇಶ್ವರ್‌ ಪೂಜಾರ ಮತ್ತು ಭರತ್‌ ಮೂವರ ನಡುವೆ ಪೈಪೋಟಿ ಇದ್ದು, ಯಾರು ಅಂತಿಮವಾಗಿ ಆರಂಭಿಕನಾಗಿ ಕಣಕ್ಕಿಳಿಯುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments