ಇಂದು ಯಾವ ಯಾವ ಪಂದ್ಯಗಳ ನಡುವೆ ಟೆಸ್ಟ್ ಆರಂಭ?

Webdunia
ಗುರುವಾರ, 25 ನವೆಂಬರ್ 2021 (08:01 IST)
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದ ಭಾರತ ತಂಡ ಇದೀಗ ಟೆಸ್ಟ್ ಸರಣಿ  ಮೇಲೆ ಕಣ್ಣಿಟ್ಟಿದೆ.
ಭಾರತ ಹಾಗೂ ನ್ಯೂಜಿಲೆಂಡ್  ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದಿನಿಂದ ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಈಗಾಗಲೇ ತಿಳಿದಿರುವಂತೆ ಪ್ರಮುಖ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧ ಕಣಕ್ಕಿಳಿಯುತ್ತಿದೆ. ಅಜಿಂಕ್ಯಾ ರಹಾನೆ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು, ಶ್ರೇಯಸ್ ಅಯ್ಯರ್  ಟೆಸ್ಟ್ಗೆ ಪದಾರ್ಪಣೆ ಮಾಡಲಿದ್ದಾರೆ. ಉಭಯ ತಂಡಗಳಿಗೆ ಇದೊಂದು ಸೇಡಿನ ಪಂದ್ಯವಾಗಿದೆ. ನ್ಯೂಜಿಲೆಂಡ್ ತಂಡ ಟಿ20 ಸರಣಿಯಲ್ಲಿ ಅನುಭವಿಸಿದ ಮುಖಭಂಗಕ್ಕೆ ಸೇಡು ತೀರಿಸಿಕೊಳ್ಳುವ ಕಾತುರದಲ್ಲಿದ್ದರೆ, ಇತ್ತ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಸೋತಿದ್ದಕ್ಕೆ ತಕ್ಕ ಉತ್ತರ ನೀಡಲು ತಯಾರಾಗಿದೆ. ಹೀಗಾಗಿ ಕಾನ್ಪುರ ಟೆಸ್ಟ್ ಸಾಕಷ್ಟು ಕುತೂಹಲ ಕೆರಳಿಸಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಗಾಯಗೊಂಡಿರುವ ಕೆಎಲ್. ರಾಹುಲ್ ಅವರಿಲ್ಲದೇ ಕಣಕ್ಕಿಳಿಯುತ್ತಿರುವ ತಂಡದಲ್ಲಿ ಯುವ ಆಟಗಾರರಿಗೆ ಮಿಂಚಲು ಅವಕಾಶ ಲಭಿಸಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಜೊತೆ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸುವರು. ಕೊಹ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡುವುದು ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಕ್ರೀಸ್‌ಗೆ ಬರುವುದು ಖಚಿತ. ಸುಮಾರು ಒಂದು ವರ್ಷದಿಂದ ಶತಕದ ಬರ ಎದುರಿಸುತ್ತಿರುವ ಪೂಜಾರ ಇಲ್ಲಿ ಮತ್ತೆ ಲಯಕ್ಕೆ ಮರಳುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments