Select Your Language

Notifications

webdunia
webdunia
webdunia
webdunia

ಪ್ಯಾರಾಲಿಂಪಿಕ್ಸ್: ವಿಶ್ವ ದಾಖಲೆಯೊಂದಿಗೆ ಚಿನ್ನ ಗೆದ್ದ ಅವನಿ

ಪ್ಯಾರಾಲಿಂಪಿಕ್ಸ್: ವಿಶ್ವ ದಾಖಲೆಯೊಂದಿಗೆ ಚಿನ್ನ ಗೆದ್ದ ಅವನಿ
ಟೋಕಿಯೋ , ಸೋಮವಾರ, 30 ಆಗಸ್ಟ್ 2021 (09:18 IST)
ಟೋಕಿಯೋ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್ ಅವನಿ ಲೆಖರ ಇಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.


10 ಮೀ. ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಚಿನ್ನ ಗೆದ್ದು ವಿಶ್ವದಾಖಲೆ ಮಾಡಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ತಾರೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

249.6 ಶಾಟ್ ಹೊಡೆದ ಅವನಿ 2018 ರಲ್ಲಿ ಉಕ್ರೇನ್ ತಾರೆ ಮಾಡಿದ್ದ ವಿಶ್ವ ದಾಖಲೆ ಸಮಗೊಳಿಸಿದ್ದಾರೆ. ಇದು ಭಾರತಕ್ಕೆ ಈ ಪ್ಯಾರಾಲಿಂಪಿಕ್ಸ್ ನಲ್ಲಿ ಸಿಕ್ಕಿದ ನಾಲ್ಕನೇ ಪದಕವಾಗಿದೆ.

ನಿನ್ನೆ ಎರಡು ಪದಕಗಳನ್ನು ಭಾರತ ಗೆದ್ದುಕೊಂಡಿತ್ತು. ಇಂದು ಬೆಳ್ಳಂ ಬೆಳಿಗ್ಗೆಯೇ ಶುಭಾರಂಭ ಮಾಡಿದ್ದು, ಮತ್ತಷ್ಟು ಪದಕಗಳ ನಿರೀಕ್ಷೆ ಭಾರತದ ತಾರೆಯರ ಮೇಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ