Webdunia - Bharat's app for daily news and videos

Install App

ಬ್ಯಾಡ್ಮಿಂಟನ್‌: ಸಾತ್ವಿಕ್‌ - ಚಿರಾಗ್ ಶೆಟ್ಟಿ ಜೋಡಿ ಮುಡಿಗೆ ಮತ್ತೊಂದು ಚಾಂಪಿಯನ್‌ ಕಿರೀಟ

Sampriya
ಭಾನುವಾರ, 19 ಮೇ 2024 (15:46 IST)
Photo Courtesy X
ಬ್ಯಾಂಕಾಕ್: ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಭಾನುವಾರ ನಡೆದ ಥಾಯ್ಲೆಂಡ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಪುರುಷರ ಡಬಲ್ಸ್‌ನ ಫೈನಲ್‌ನಲ್ಲಿ ಭಾರತದ ಆಟಗಾರರಾದ  ಸಾತ್ವಿಕ್  - ಚಿರಾಗ್‌ ಜೋಡಿಯು 21-15, 21-15ರಿಂದ ಚೀನಾದ ಚೆನ್ ಬೋ ಯಾಂಗ್ ಮತ್ತು ಚೀನಾ ತೈಪೆಯ ಲಿಯು ಯಿ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್‌ ಆಗಿದೆ.

ಸಾತ್ವಿಕ್- ಚಿರಾಗ್ ಜೋಡಿಯು ಶನಿವಾರ ಸೆಮಿಫೈನಲ್‌ನಲ್ಲಿ 21-11, 21-12ರಿಂದ ಚೀನಾ ತೈಪೆಯ ಲು ಮಿಂಗ್-ಚೆ ಮತ್ತು ಟ್ಯಾಂಗ್ ಕೈ-ವೀ (ಚೀನಾ ತೈಪೆ) ಜೋಡಿಯನ್ನು ಸೋಲಿಸಿ ಫೈನಲ್‌ ಪ್ರವೇಶಿಸಿತ್ತು.

ಸಾತ್ವಿಕ್‌- ಚಿರಾಗ್‌ ಜೋಡಿಯು ಕಳೆದ ವರ್ಷದ ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದು, ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದೆ. ಜುಲೈ- ಆಗಸ್ಟ್‌ನಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ಪ್ರಸ್ತುತ ವಿಶ್ವ ರ್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ಮಹಿಳಾ ಡಬಲ್ಸ್‌ನಲ್ಲಿ ನಾಲ್ಕನೇ ಶ್ರೇಯಾಂಕದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ಸೆಮಿಫೈನಲ್‌ನಲ್ಲಿ ನಿರಾಸೆ ಅನುಭವಿಸಿತು. ಭಾರತದ ಆಟಗಾರ್ತಿಯರು 12-21, 20-22ರಿಂದ ಅಗ್ರ ಶ್ರೇಯಾಂಕದ ಜೊಂಗ್ಕೋಲ್ಫಾನ್ ಕಿತರಕುಲ್ ಮತ್ತು ರವಿಂದಾ ಪ್ರಜೋಂಗ್ಜೈ (ಥಾಯ್ಲೆಂಡ್‌) ಜೋಡಿಗೆ ಮಣಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments