ಭಾರತದ ಪರ ಮತ್ತೆ ಕಾಲ್ಚಳಕ ತೋರಿಸಲಿರುವ ಚೆಟ್ರಿ: ನಿವೃತ್ತಿ ವಾಪಸ್‌ ಪಡೆದ ಫುಟ್‌ಬಾಲ್‌ ದಿಗ್ಗಜ

Sampriya
ಶುಕ್ರವಾರ, 7 ಮಾರ್ಚ್ 2025 (14:28 IST)
Photo Courtesy X
ಬೆಂಗಳೂರು: ಭಾರತ ಫುಟ್‌ಬಾಲ್‌ ದಿಗ್ಗಜ, ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ನ ನಾಯಕ ಸುನಿಲ್‌ ಚೆಟ್ರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಕಳೆದ ವರ್ಷ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ್ದ ಅವರು ತಮ್ಮ ನಿರ್ಧಾರವನ್ನು ವಾಪಸ್‌ ಪಡೆದಿದ್ದಾರೆ.

ಭಾರತದ ಸ್ಟಾರ್‌ ಫಾರ್ವಡ್‌ ಆಟಗಾರ, 40 ವರ್ಷದ ಚೆಟ್ರಿ ಮತ್ತೆ ಜೆಲಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತ ತಂಡದ ಮುಂದಿನ ವೇಳಾಪಟ್ಟಿಯಾದ ಎಎಫ್‌ಸಿ ಏಷ್ಯನ್‌ ಕಪ್‌ ನಲ್ಲಿ ಆಡುವುದನ್ನು ಕಾಣಬಹುದಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಅವರು ನಿವೃತ್ತಿ ಘೋಷಿಸಿದ್ದರು.

ಎಎಫ್‌ಸಿ ಏಷ್ಯನ್‌ ಕಪ್‌ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಭಾರತ ತಂಡ ಮಾರ್ಚ್‌ 25 ರಂದು ಬಾಂಗ್ಲಾ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಸುನಿಲ್‌ ಚೆಟ್ರಿ ಅಂಗಳಕ್ಕೆ ಇಳಿಯಲಿದ್ದಾರೆ. ಕಳೆದ ವರ್ಷ ಫಿಫಾ ವಿಶ್ವಕಪ್ 2026 ಅರ್ಹತಾ ಸುತ್ತಿನ ಪಂದ್ಯದಲ್ಲಿ ಕುವೈತ್ ವಿರುದ್ಧ 0-0 ಡ್ರಾ ಸಾಧಿಸಿದ ಬಳಿಕ ಛೆಟ್ರಿ ನಿವೃತ್ತಿ ಘೋಷಿಸಿದ್ದರು.

ಭಾರತದ ಪರ ಅತಿ ಹೆಚ್ಚು ಗೋಲು ದಾಖಲಿಸಿದ ದಾಖಲೆ ಅವರ ಹೆಸರಿನಲ್ಲಿದೆ.  ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ ಅತಿ ಹೆಚ್ಚು ಗೋಲುಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಚೆಟ್ರಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರ ಖಾತೆಯಲ್ಲಿ ಸದ್ಯ 94 ಗೋಲುಗಳು ಇವೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್ ಮೆಸ್ಸಿ ಮತ್ತು ಅಲಿ ಡೀ ಅವರು ಚೆಟ್ರಿಗಿಂತ ಮುಂದಿದ್ದಾರೆ.

ಸುನಿಲ್ ಚೆಟ್ರಿ ಇಂಡಿಯನ್‌ ಸೂಪರ್‌ ಲೀಗ್‌ನಲ್ಲೂ ಮಿಂಚುತ್ತಿದ್ದಾರೆ. ಅವರು ಆಡಿದ 23 ಪಂದ್ಯಗಳಲ್ಲಿ 12 ಗೋಲುಗಳನ್ನು ದಾಖಲಿಸಿದ್ದಾರೆ. ಈ ಮೂಲಕ ಇವರು ಅತಿ ಹೆಚ್ಚು ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪ್ರಸಕ್ತ ಐಎಸ್‌ಎಲ್‌ನಲ್ಲಿ ಬೆಂಗಳೂರು ಫುಟ್ಬಾಲ್ ಕ್ಲಬ್‌ ಸ್ಥಿರ ಪ್ರದರ್ಶನ ನೀಡಿದೆ. ಈ ತಂಡ ಆಡಿದ 23 ಪಂದ್ಯಗಳಲ್ಲಿ 11 ಜಯ, 5 ಡ್ರಾ, 7 ಸೋಲು ಕಂಡಿದ್ದು 38 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments