Publish Date: Fri, 29 Jul 2022 (09:40 IST)
Updated Date: Fri, 29 Jul 2022 (09:47 IST)
ನವದೆಹಲಿ: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಭಾರತೀಯ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
ಭಾರತೀಯ ಕ್ರೀಡಾಳುಗಳು ಪದಕ ಗೆದ್ದು ಬರಲಿ, ದೇಶದ ಕೀರ್ತಿ ಹೆಚ್ಚಿಸಲಿ. ನಮ್ಮ ತಂಡ ಪದಕಗಳನ್ನು ಗೆದ್ದು ತಂದೇ ತರುತ್ತದೆಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
ಇಂದು ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪಂದ್ಯವನ್ನಾಡುತ್ತಿದ್ದು ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಹಿಳೆಯರ ತಂಡಕ್ಕೆ ಶುಭ ಹಾರೈಸಿದ್ದಾರೆ.