Webdunia - Bharat's app for daily news and videos

Install App

ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ನಲ್ಲಿ ಕುಟುಂಬ ಸಮೇತ ಬಂದ ಕ್ರೀಡಾ ತಾರೆಯರು

Krishnaveni K
ಶುಕ್ರವಾರ, 1 ಮಾರ್ಚ್ 2024 (16:28 IST)
ಜಾಮ್ ನಗರ: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕ್ರೀಡಾ ತಾರೆಯರ ದಂಡೇ ಜಾಮ್ ನಗರಕ್ಕೆ ಬಂದಿಳಿದಿದೆ.

ಇಂದಿನಿಂದ ಮೂರು ದಿನಗಳ ಕಾಲ ಜಾಮ್ ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಕಾರ್ಯಕ್ರಮಗಳು ನಡೆಯುತ್ತಿದೆ. ಇದಕ್ಕಾಗಿ ದೊಡ್ಡ ದೊಡ್ಡ ಗಣ್ಯರೇ ಆಗಮಿಸುತ್ತಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಪತ್ನಿ ಸಾಕ್ಷಿ ಜೊತೆ ಪ್ರಿವೆಡ್ಡಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ತಮ್ಮ ಪತ್ನಿ ಅಂಜಲಿ, ಪುತ್ರಿಯ ಜೊತೆಗೆ ಸಮಾರಂಭಕ್ಕೆ ಬಂದಿದ್ದಾರೆ. ಅವರಲ್ಲದೆ, ಮಾಜಿ ವೇಗಿ ಜಹೀರ್ ಖಾನ್ ಮತ್ತು ಅವರ ಪತ್ನಿ ಸಾಗರಿಕಾ ಕೂಡಾ ಬಂದಿಳಿದಿದ್ದಾರೆ. ಅಂಬಾನಿ ಕುಟುಂಬದ ಎಲ್ಲಾ ಕಾರ್ಯಕ್ರಮಗಳಿಗೆ ಈ ಕ್ರೀಡಾ ತಾರೆಯರು ಸದಾ ಹಾಜರಾಗುತ್ತಾರೆ. ಇದೀಗ ಅನಂತ್ ಮದುವೆ ಕಾರ್ಯಕ್ರಮಗಳಿಗೂ ಹಾಜರಾಗುತ್ತಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟಿಗರಲ್ಲದೆ, ದೇಶದ ಇತರೆ ಖ್ಯಾತ ಕ್ರೀಡಾ ತಾರೆಯರಿಗೂ ಆಹ್ವಾನ ನೀಡಲಾಗಿದೆ.ಹೀಗಾಗಿ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಪತಿ ಪಾರುಪಳ್ಳಿ ಕಶ್ಯಪ್ ಜೊತೆ ಸ್ಟೈಲಿಶ್ ಉಡುಗೆಯಲ್ಲಿ ಜಾಮ್ ನಗರಕ್ಕೆ ಬಂದಿದ್ದಾರೆ. ಕ್ರೀಡಾ ಲೋಕದ ದಿಗ್ಗಜರಲ್ಲದೆ ಸಿನಿಮಾ ತಾರೆಯರು, ಉದ್ಯಮಿ ಆನಂದ್ ಮಹೀಂದ್ರ, ಅಮೆರಿಕಾ ಮಾಜಿ ಅಧ‍್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್, ಪಾಪ್ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಎಲ್ಲಾ ತಾರೆರೂ ಇಂದಿನಿಂದ ಮೂರು ದಿನಗಳ ಕಾಲ ಇಲ್ಲಿಯೇ ಉಳಿದುಕೊಂಡು ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅಂಬಾನಿ ಕುಟುಂಬ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments