ಟೋಕಿಯೋ: ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ನೀರಜ್ ಚೋಪ್ರಾಗೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ.
ಪ್ರಧಾನಿ ಮೋದಿ ಟ್ವೀಟ್ ಮೂಲಕ ನೀರಜ್ ಚೋಪ್ರಾ ಸಾಧನೆಯನ್ನು ಕೊಂಡಾಡಿದ್ದು, ನೀರಜ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರ ಸಾಧನೆ ಎಂದೆಂದಿಗೂ ಸ್ಮರಣೀಯ. ಇದು ಚಾರಿತ್ರಿಕ ಸಾಧನೆ ಎಂದು ಕೊಂಡಾಡಿದ್ದಾರೆ.
ಇನ್ನು, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಪ್ರವಾಹದಂತೆ ಸಂದೇಶ ಬರೆಯುತ್ತಿದ್ದು, ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತದ ರಾಷ್ಟ್ರಗೀತೆ ಮೊಳಗುವುದನ್ನು ನೋಡಲು ಉತ್ಸುಕವಾಗಿರುವುದಾಗಿ ಹೇಳಿದ್ದಾರೆ.