ನವದೆಹಲಿ: ಇತ್ತೀಚೆಗೆ ಒಡಿಶಾದಲ್ಲಿ ನಡೆದಿದ್ದ ಭೀಕರ ರೈಲು ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದರೆ, ಮತ್ತೆ ಕೆಲವರು ಗಂಭೀರ ಗಾಯಗೊಂಡಿದ್ದರು.
ಈ ಘಟನೆ ಬಗ್ಗೆ ಎಲ್ಲಾ ಸೆಲೆಬ್ರಿಟಿಗಳು, ಜನ ಸಾಮಾನ್ಯರು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಭಾರತ ಫುಟ್ಬಾಲ್ ತಂಡ ಒಡಿಶಾ ದುರಂತದ ಪರಿಹಾರ ಕಾರ್ಯಕ್ಕಾಗಿ 20 ಲಕ್ಷ ರೂ. ದೇಣಿಗೆ ನೀಡಿ ಮೆಚ್ಚುಗೆಗೆ ಪಾತ್ರವಾಗಿದೆ.
ಭಾನುವಾರ ಲೆಬನನ್ ವಿರುದ್ಧ ಇಂಟರ್ ಕಾಂಟಿನೆಂಟಲ್ ಕಪ್ ಫೈನಲ್ ನಲ್ಲಿ 2-0 ಅಂತರದಿಂದ ಗೆಲುವು ಸಾಧಿಸಿದ ಬಳಿಕ ಸುನಿಲ್ ಚೆಟ್ರಿ ನೇತೃತ್ವದ ಭಾರತ ತಂಡಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ 1 ಕೋಟಿ ರೂ. ಬಹುಮಾನ ಘೋಷಿಸಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಫುಟ್ಬಾಲಿಗರು 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಕೊಡುಗೆ ನೀಡಿದ್ದಾರೆ.