ಅಹಮ್ಮದಾಬಾದ್: ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಇಂದು ಅತಿಥೇಯ ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಗ್ರೂಪ್ ಎ ಯಲ್ಲಿರುವ ಭಾರತ ಇದುವರೆಗೆ ತಾನು ಆಡಿದ ನಾಲ್ಕರಲ್ಲಿ ಮೂರನ್ನು ಗೆದ್ದುಕೊಂಡಿದೆ. ಇಂಗ್ಲೆಂಡ್ ನಾಲ್ಕರಲ್ಲಿ ಎರಡು ಪಂದ್ಯಗಳನ್ನು ಗೆದ್ದಿದೆ. ಇಂದಿನ ಪಂದ್ಯದಲ್ಲಿ ಗೆದ್ದರೆ ಭಾರತದ ಸೆಮಿಫೈನಲ್ ಹಾದಿ ಸುಗಮವಾಗಲಿದೆ.
ಇಂಗ್ಲೆಂಡ್ ತಂಡಕ್ಕೆ ಹೋಲಿಸಿದರೆ ಅನೂಪ್ ಕುಮಾರ್ ನೇತೃತ್ವದ ಭಾರತೀಯ ತಂಡ ಬಲಿಷ್ಠವಾಗಿದೆ. ಮೊದಲ ಪಂದ್ಯ ಬಿಟ್ಟರೆ ಉಳಿದ ಮೂರೂ ಪಂದ್ಯಗಳಲ್ಲಿ ಗೆದ್ದು ಆತ್ಮವಿಶ್ವಾಸದಲ್ಲದೆ. ಭಾರತೀಯ ಕಾಲಮಾನ ರಾತ್ರಿ 9 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ನೇರ ಪ್ರಸಾರ ಮಾಡಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ