Select Your Language

Notifications

webdunia
webdunia
webdunia
Thursday, 24 April 2025
webdunia

ಖ್ಯಾತ ಬಾಸ್ಕೆಟ್ ಬಾಲ್ ಆಟಗಾರ ಕೊಬೆ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ ಕೊಹ್ಲಿ, ರೋಹಿತ್ ಶರ್ಮಾ

ವಿರಾಟ್ ಕೊಹ್ಲಿ
ಲಾಸ್ ಏಂಜಲೀಸ್ , ಸೋಮವಾರ, 27 ಜನವರಿ 2020 (09:37 IST)
ಲಾಸ್ ಏಂಜಲೀಸ್: ವಿಶ್ವವಿಖ್ಯಾತ ಬಾಸ್ಕೆಟ್ ಬಾಲ್ ಆಟಗಾರ ಕೊಬೆ ಬ್ರಿಯಾಂಟ್ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರ ನಿಧನಕ್ಕೆ ಕ್ರೀಡಾ ಲೋಕವೇ ಕಂಬನಿ ಮಿಡಿದಿದೆ.


ಭಾರತೀಯ ಕಾಲಮಾನ ಪ್ರಕಾರ ನಿನ್ನೆ ರಾತ್ರಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಕೊಬೆ ಮತ್ತು ಅವರ ಪುತ್ರಿ ಸಿಯಾನ ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ. ಲಾಸ್ ಏಂಜಲೀಸ್ ಸಮೀಪ ಈ ದುರ್ಘಟನೆ ನಡೆದಿದೆ.

ಕೊಬೆ ಒಲಿಂಪಿಕ್ ಚಿನ್ನದ ಪದಕ ವಿಜೇತ. ಅಲ್ಲದೆ, ಬಾಸ್ಕೆಟ್ ಬಾಲ್ ಕ್ರೀಡಾ ಲೋಕದಲ್ಲಿ ಅಪ್ರತಿಮ ಸಾಧನೆ ಮಾಡಿದವರು. ಅವರ ನಿಧನಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ವೀರೇಂದ್ರ ಸೆಹ್ವಾಗ್, ಟೆನಿಸ್ ತಾರೆ ಸಾನಿಯಾ ಮಿರ್ಜಾ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಯಶಸ್ಸಿನ ಗುಟ್ಟು ಬಿಟ್ಟುಕೊಟ್ಟ ಕೆಎಲ್ ರಾಹುಲ್