Publish Date: Thu, 12 Aug 2021 (10:04 IST)
Updated Date: Thu, 12 Aug 2021 (10:04 IST)
ಮುಂಬೈ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೈಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರನ್ನು ಭೇಟಿಯಾಗಿದ್ದಾರೆ.
ಮೀರಾಬಾಯಿ ಬೆಳ್ಳಿ ಪದಕ ನೋಡಿ ಖುಷಿಪಟ್ಟುಕೊಂಡ ಸಚಿನ್, ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಷಿಯಲ್ ಮೀಡಿಯಾ ಪುಟಗಳಲ್ಲಿ ಈ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
ಸಚಿನ್ ಸರ್ ಭೇಟಿಯಾಗಿ ಖುಷಿಯಾಯಿತು. ಅವರ ಮಾತುಗಳು ನನಗೆ ಸ್ಪೂರ್ತಿ ಎಂದು ಮೀರಾಬಾಯಿ ಹೇಳಿಕೊಂಡರೆ, ಸಚಿನ್ ಮೀರಾ ಸಾಧನೆ ಬಗ್ಗೆ ಕೊಂಡಾಡಿದ್ದಾರೆ. ಹಾಗೂ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.