Webdunia - Bharat's app for daily news and videos

Install App

ಪ್ರೊ ಕಬಡ್ಡಿ ಕದನಕ್ಕೆ ಮುಹೂರ್ತ ಫಿಕ್ಸ್‌: ಹೊಸ ಹುರುಪಿನಲ್ಲಿ ಬೆಂಗಳೂರು ಗೂಳಿಗಳು

Sampriya
ಬುಧವಾರ, 4 ಸೆಪ್ಟಂಬರ್ 2024 (14:33 IST)
Photo Courtesy X
ಬೆಂಗಳೂರು: ಪ್ರೊ ಕಬಡ್ಡಿ ಲೀಗ್​ನ 11ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 18 ರಿಂದ 11ನೇ ಆವೃತ್ತಿಯ ಕಬಡ್ಡಿ ಕದನ ಶುರುವಾಗಲಿದೆ. ಈ ಬಾರಿ ಕೂಡ ಒಟ್ಟು 12 ತಂಡಗಳು ಪೈಪೋಟಿ ನಡೆಸಲಿವೆ. ಮೊದಲ ಪಂದ್ಯಕ್ಕೆ ಹೈದರಾಬಾದ್‌ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದ ಆತಿಥ್ಯವಹಿಸಲಿದೆ.

ಈ ಆವೃತ್ತಿಯಲ್ಲಿ ಮೂರು ಹಂತಗಳಲ್ಲಿ ಪಂದ್ಯಗಳು ನಡೆಯಲಿದೆ. ಮೊದಲ ಹಂತವು ಅಕ್ಟೋಬರ್ 18 ರಿಂದ ಶುರುವಾಗಲಿದೆ. ಇನ್ನು ದ್ವಿತೀಯ ಹಂತದ ಪಂದ್ಯಗಳು ನವೆಂಬರ್ 10 ರಿಂದ ಪ್ರಾರಂಭವಾಗಲಿದ್ದು, ತೃತೀಯ ಹಂತದ ಮ್ಯಾಚ್​ಗಳು ಡಿಸೆಂಬರ್ 3 ರಿಂದ ಶುರುವಾಗಲಿದೆ. ಈ ಮೂರು ಹಂತದ ಪಂಧ್ಯಗಳು ಹೈದರಾಬಾದ್, ಪುಣೆ ಹಾಗೂ ನೋಯ್ಡಾದಲ್ಲಿ ನಡೆಯಲಿದೆ.

ಮೂರು ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಮೊದಲ ಸುತ್ತಿನ ಪಂದ್ಯಗಳು ಹೈದರಾಬಾದ್​ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಸುತ್ತಿನ ಪಂದ್ಯಗಳಿಗೆ ನೋಯ್ಡಾ ಒಳಾಂಗಣ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಇನ್ನು ಮೂರನೇ ಹಂತದ ಪಂದ್ಯಗಳು ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ ಈ ಬಾರಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಬುಲ್ಸ್ ತಂಡದ ಯಾವುದೇ ಪಂದ್ಯಗಳಿರುವುದಿಲ್ಲ.

 ಕಳೆದ ಸೀಸನ್ ಪ್ರೊ ಕಬಡ್ಡಿ ಲೀಗ್ ಅನ್ನು 12 ನಗರಗಳಲ್ಲಿ ಆಯೋಜಿಸಲಾಗಿತ್ತು. ಎಲ್ಲಾ ಫ್ರಾಂಚೈಸಿಗಳು ತಮ್ಮ ತವರು ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಿದ್ದರು. ಆದರೆ ಈ ಬಾರಿ ಮೂರು ನಗರಗಳಲ್ಲಿ ಮಾತ್ರ ಟೂರ್ನಿಯನ್ನು ಆಯೋಜಿಸಲು ಪ್ರೊ ಕಬಡ್ಡಿ ಆಯೋಜಕರು ನಿರ್ಧರಿಸಿದ್ದಾರೆ. ಹೀಗಾಗಿ ತವರಿನಲ್ಲಿ ಬೆಂಗಳೂರು ಬುಲ್ಸ್ ತಂಡದ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಅಭಿಮಾನಿಗಳಿರುವುದಿಲ್ಲ.

ಬೆಂಗಳೂರು ಬುಲ್ಸ್ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ. ಪ್ರೊ ಕಬಡ್ಡಿ ಲೀಗ್ ಸೀಸನ್ 6 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಬಳಿಕ ಬುಲ್ಸ್​ ಪಡೆಗೆ ಮತ್ತೆ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಈ ಬಾರಿ ಹೊಸ ತಂಡದೊಂದಿಗೆ ಕಣಕ್ಕೆ ಇಳಿಯಲು ಸಜ್ಜಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments