ನವದೆಹಲಿ: ಒಲಿಂಪಿಕ್ಸ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿಗೆ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತದ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಈಗ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ.
ಡೈಮಂಡ್ ಲೀಗ್ ಸೀರೀಸ್ ನ ಪುರುಷರ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಫೈನಲ್ಸ್ ನಲ್ಲಿ ಗೆದ್ದು ಡೈಮಂಡ್ ಟ್ರೋಫಿ ಗೆದ್ದುಕೊಂಡಿದ್ದಾರೆ. ಈ ಮೂಲಕ ಡೈಮಂಡ್ ಟ್ರೋಫಿ ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸ ಬರೆದಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ವೇಳೆ ಗಾಯದಿಂದಾಗಿ ಹೊರ ಹೋಗಿದ್ದ ನೀರಜ್ ಈಗ ಗಾಯದಿಂದ ಚೇತರಿಸಿಕೊಂಡ ಬಳಿಕ ಅದ್ಭುತ ಕಮ್ ಬ್ಯಾಕ್ ಮಾಡಿದ್ದಾರೆ. ಒಟ್ಟು 88.44 ದೂರ ಎಸೆದ ನೀರಜ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.