ನವದೆಹಲಿ: ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಕೇವಲ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಈ ಸಾಧನೆಗೆ ನೀರಜ್ ಚೋಪ್ರಾರನ್ನು ಕೊಂಡಾಡಿರುವ ಪ್ರಧಾನಿ ಮೋದಿ, ನಮ್ಮ ಹೆಮ್ಮೆಯ ಕ್ರೀಡಾಪಟುವಿನಿಂದ ಅತ್ಯುತ್ತಮ ಸಾಧನೆ. ನೀರಜ್ ಚೋಪ್ರಾಗೆ ಅಭಿನಂದನೆಗಳು. ಇದು ನಮ್ಮ ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಗಳಿಗೆ. ನೀರಜ್ ಚೋಪ್ರಾ ಭವಿಷ್ಯಕ್ಕೆ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.