Publish Date: Sun, 08 Aug 2021 (09:14 IST)
Updated Date: Sun, 08 Aug 2021 (09:16 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ನೀರಜ್ ಚೋಪ್ರಾಗೆ ಕರೆ ಮಾಡಿದ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ ನೀರಜ್ ಸಾಧನೆಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಪ್ರಧಾನಿ ಮೋದಿ ಮುಖಾಮುಖಿ ಭೇಟಿಯಾಗಲು ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಅಂದರೆ ಆಗಸ್ಟ್ 15 ರಂದು ಭೇಟಿಯಾಗಲು ಬರುತ್ತೀರಲ್ಲವೇ? ಎಂದು ನೀರಜ್ ಗೆ ಮೋದಿ ಆಹ್ವಾನ ನೀಡಿದ್ದಾರೆ.
ಮೂಲಗಳ ಪ್ರಕಾರ ಸ್ವಾತಂತ್ರ್ಯ ದಿನದಂದು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಕ್ರೀಡಾಳುಗಳನ್ನು ಪ್ರಧಾನಿ ಮೋದಿ ಭೇಟಿಯಾಗುವ ಕಾರ್ಯಕ್ರಮವಿದೆ ಎನ್ನಲಾಗಿದೆ.