Publish Date: Fri, 28 Aug 2026 (14:12 IST)
Updated Date: Fri, 28 Aug 2026 (14:14 IST)
ಚೆನ್ನೈ: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಅಮೆರಿಕದ ಸೇಂಟ್ ಲೂಯಿಸ್‌ನಲ್ಲಿ ನಡೆದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಫೈನಲ್‌ನಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದ ಆರಂಭದಲ್ಲಿ ಪ್ರಜ್ಞಾನಂದ ಅವರು ಹಾಲಿ ಚಾಂಪಿಯನ್ ಫ್ಯಾಬಿಯಾನೊ ಕರುವಾನ ವಿರುದ್ಧ 6 ಅಂಕಗಳ ಹಿನ್ನಡೆಯಲ್ಲಿ (3-9) ಇದ್ದರು. ಆದರೆ, ರಾಪಿಡ್ ಮತ್ತು ಬ್ಲಿಟ್ಜ್ ವಿಭಾಗದಲ್ಲಿ ಅದ್ಭುತ ಆಟ ಪ್ರದರ್ಶಿಸಿ ಪಂದ್ಯವನ್ನು ತಿರುಗಿಸಿದರು.
ಅತ್ಯಂತ ರೋಚಕವಾಗಿ ಸಾಗಿದ ಹೋರಾಟದಲ್ಲಿ ಪ್ರಜ್ಞಾನಂದ ಅವರು ಫ್ಯಾಬಿಯಾನೊ ಕರುವಾನಾ ಅವರನ್ನು 15-13 ಅಂಕಗಳ ಅಂತರದಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದರು.
ಈ ಭರ್ಜರಿ ವಿಜಯದೊಂದಿಗೆ ಪ್ರಜ್ಞಾನಂದ ಅವರು ಅಂದಾಜು ಭಾರತೀಯ ರೂಪಾಯಿ 1.90 ಕೋಟಿಗೂ ಅಧಿಕ ಮೊತ್ತದ ಬಹುಮಾನದ ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ, ಮುಂದಿನ ವರ್ಷದ ಟೂರ್‌ಗೆ ನೇರ ಅರ್ಹತೆಯನ್ನು ಪಡೆದಿದ್ದಾರೆ.
ವಿಶ್ವ ಚಾಂಪಿಯನ್‌ಷಿಪ್ ಬಿಟ್ಟರೆ ಚೆಸ್ ಜಗತ್ತಿನಲ್ಲಿ ಗ್ರ್ಯಾಂಡ್ ಚೆಸ್ ಟೂರ್ ಅಷ್ಟು ಮಹತ್ವ ಹಾಗೂ ಪರಂಪರೆ ಹೊಂದಿರುವ ದೊಡ್ಡ ಟೂರ್ನಿಯಾಗಿದೆ ಎಂದು ಪ್ರಜ್ಞಾನಂದ ಈ ಗೆಲುವಿನ ಬಳಿಕ ಬಣ್ಣಿಸಿದ್ದಾರೆ. ಈ ವರ್ಷದ ನಾರ್ವೆ ಚೆಸ್ ಟೋನಿಯನ್ನು ಗೆದ್ದು ಬೀಗಿದ್ದ ಪ್ರಜ್ಞಾನಂದ, ಈಗ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಮತ್ತೊಮ್ಮೆ ಭಾರತದ ಕೀರ್ತಿಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ್ದಾರೆ.
ಚೆಸ್‌ನಲ್ಲಿ ಹೊಸ ಇತಿಹಾಸ ಬರೆದೆ ಪ್ರಜ್ಞಾನಂದ ಅವರಿಗೆ ಅಭಿನಂದನೆಗಳ ಸುರಿಮಳೆ ಬರುತ್ತಿವೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಅಭಿನಂದಿಸಿ ಪೋಸ್ಟ್ ಮಾಡಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ