ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

Sampriya
ಶನಿವಾರ, 1 ನವೆಂಬರ್ 2025 (14:51 IST)
Photo Credit X
ನವದೆಹಲಿ: ದಬಂಗ್‌ ಡೆಲ್ಲಿ ತಂಡವು ಪ್ರೊ ಕಬಡ್ಡಿ ಲೀಗ್‌ನ 12ನೇ ಆವೃತ್ತಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ಪುಣೇರಿ ಪಲ್ಟನ್‌ ತಂಡವನ್ನು 31–28ರಿಂದ ಮಣಿಸಿ ಎರಡನೇ ಬಾರಿ ಪ್ರಶಸ್ತಿ ಗೆದ್ದಿತು.

ದಬಂಗ್‌ ಡೆಲ್ಲಿ ತಂಡವು ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್‌ ಆಗಿತ್ತು. 

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20–14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್‌ ಪುಣೇರಿ ತಂಡವು 3 ಅಂಕಗಳಿಂದ ಸೋತಿತು. 

ಡೆಲ್ಲಿ ತಂಡಕ್ಕೆ ಇದು ಎರಡನೇ ಪಿಕೆಎಲ್‌ ಪ್ರಶಸ್ತಿ. ತಂಡದ ಮುಖ್ಯ ಕೋಚ್ ಜೋಗಿಂದರ್ ನರ್ವಾಲ್ ಅವರು ನಾಯಕರಾಗಿದ್ದಾಗ ಎಂಟನೇ ಆವೃತ್ತಿಯಲ್ಲಿ (2021–22) ಮೊದಲ ಬಾರಿ ಕಿರೀಟ ಮುಡಿಗೇರಿಸಿಕೊಂಡಿತ್ತು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments