ಸೆಪ್ಟೆಂಬರ್ ತಿಂಗಳಲ್ಲಿ ಕೇರಳದ ಕೋಚಿಕ್ಕೋಡ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರೀಡಾಪಟು ಪಿ.ಟಿ. ಉಷಾ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆ ಕೇರಳಾ ಮತ್ತು ಕ್ರೀಡಾವಲಯದಲ್ಲಿ ಉಷಾ ಅವರು ರಾಜಕೀಯವನ್ನು ಸೇರುತ್ತಾರಾ ಎಂಬ ಪ್ರಶ್ನೆಯನ್ನು ಹುಟ್ಟಿ ಹಾಕಿತ್ತು. ಆದರೆ ಈ ಊಹಾಪೋಹಗಳನ್ನು ಉಷಾ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.
ನನ್ನನ್ನು ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರಷ್ಟೇ. ಅದರರ್ಥ ನಾನು ರಾಜಕೀಯ ಪ್ರವೇಶಿಸುತ್ತೇನೆ ಎಂದಲ್ಲ. ನನಗೆ ಯಾವುದೇ ರೀತಿಯ ರಾಜಕೀಯ ಹಸಿವೆ ಇಲ್ಲ ಎಂದು ಅವರು ಹೇಳಿದ್ದಾರೆ.
ಬಿಜೆಪಿ ನಾಯಕತ್ವ ಸಂಘಟನಾ ಅಧ್ಯಕ್ಷರಾಗಲು ನನ್ನ ಒಪ್ಪಿಗೆಯನ್ನು ಕೇಳಿತು. ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದು ತಿಳಿದ ಮೇಲೆ ನಾನದಕ್ಕೆ ಒಪ್ಪಿಕೊಂಡೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಉಷಾ 2002ರಿಂದ ಉಷಾ ಕ್ರೀಡಾಪಟುಗಳ ಶಾಲೆಯನ್ನು ನಡೆಸುತ್ತಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಣಿ ಸಭೆ ಸೆಪ್ಟೆಂಬರ್ 23 ರಿಂದ 25ರವರೆಗೆ ಕೋಝಿಕ್ಕೋಡ್‌ನಲ್ಲಿ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ