Publish Date: Sun, 25 Jul 2021 (09:40 IST)
Updated Date: Sun, 25 Jul 2021 (09:43 IST)
ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ವೈಟ್ ಲಿಫ್ಟರ್ ಮೀರಾಬಾಯಿ ಚಾನುಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೀರಾಬಾಯಿ ಸಾಧನೆಗೆ ಜೈ ಎಂದಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾರತ ತಂಡಕ್ಕೂ ಚಿಯರ್ ಮಾಡಿದ್ದಾರೆ. ಇವರಲ್ಲದೆ, ಮೀರಾ ಸಾಧನೆಗೆ ನಟಿ ರಶ್ಮಿಕಾ ಮಂದಣ್ಣ, ಸ್ಯಾಂಡಲ್ ವುಡ್ ನಟ ದಿಗಂತ್ ಮಂಚಾಲೆ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.
ಕ್ರೀಡಾ ಲೋಕದಿಂದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ, ಯುವರಾಜ್ ಸಿಂಗ್, ಶಿಖರ್ ಧವನ್, ವೀರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಮೀರಾಬಾಯಿ ಸಾಧನೆಯನ್ನು ಕೊಂಡಾಡಿದ್ದಾರೆ.