Publish Date: Mon, 18 Sep 2017 (09:03 IST)
Updated Date: Mon, 18 Sep 2017 (09:06 IST)
ನವದೆಹಲಿ: ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ್ತಿ ನಿನ್ನೆ ನಡೆದ ಕೊರಿಯಾ ಓಪನ್ ಸೂಪರ್ ಸೀರೀಸ್ ಕೂಟದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಗೆಲುವನ್ನು ಅವರು ನಿನ್ನೆ ಜನ್ಮದಿನ ಆಚರಿಸಿಕೊಂಡ ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ.
‘ಈ ಗೆಲುವನ್ನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿಜೀಗೆ ಅರ್ಪಿಸುತ್ತಿದ್ದೇನೆ. ದೇಶಕ್ಕೆ ಅವರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ನಮಗೆಲ್ಲರಿಗೂ ಮಾದರಿ’ ಎಂದು ಸಿಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಸಿಂದು ಗೆಲುವಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದರು. ‘ಕೊರಿಯಾ ಓಪನ್ ಗೆದ್ದ ಪಿವಿ ಸಿಂಧುಗೆ ಅಭಿನಂದನೆಗಳು. ನಿಮ್ಮ ಸಾಧನೆಗೆ ದೇಶವೇ ಹೆಮ್ಮೆ ಪಡುತ್ತಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಆದರೆ ತಾವು ಗೆದ್ದ ಪ್ರಶಸ್ತಿಯನ್ನು ದೇಶದ ಪ್ರಧಾನಿಗೆ ಸಲ್ಲಿಸಿದ ಸಿಂಧು ನಿರ್ಧಾರ ನಿಜಕ್ಕೂ ವಿಶೇಷವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ