ವಿಶ್ವ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿಯೇ ಮುಂದುವರಿದ ಸಾನಿಯಾ ಮಿರ್ಜಾ

Webdunia
ಬುಧವಾರ, 19 ಅಕ್ಟೋಬರ್ 2016 (19:13 IST)
ವಿಶ್ವ ಟೆನಿಸ್ ಶ್ರೇಯಾಂಕದ ಮಹಿಳಾ ಡಬಲ್ಸ್ ವಿಭಾಗದಲ್ಲಿ ಸಾನಿಯಾ ಮಿರ್ಜಾ, ಸತತ 80 ವಾರಗಳವರೆಗೆ  ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸಾನಿಯಾ, ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಮಾಹಿತಿಯನ್ನು ಖಚಿತಪಡಿಸಿದ್ದಾರೆ.
 
ಸಾನಿಯಾ ಮಿರ್ಜಾ ತಮ್ಮ ಜತೆಗಾರ್ತಿ ಮಾರ್ಟಿನಾ ಹಿಂಗಿಸ್ ಅವರೊಂದಿಗೆ ಚಾರ್ಲ್‌ಸ್ಟೋನ್‌ನಲ್ಲಿ ನಡೆದ ವೋಲ್ವೋ ಕಾರ್ ಓಪನ್ ಪಂದ್ಯಾವಳಿಯಲ್ಲಿ ಜಯಗಳಿಸಿದ ನಂತರ ವಿಶ್ವ ಮಹಿಳಾ ಡಬಲ್ಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಏಕೈಕ ಭಾರತೀಯ ಮಹಿಳಾ ಕ್ರೀಡಾಪಟು ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ.
 
ಒಂದು ವೇಳೆ, ನಾನು ಗೆಲ್ಲಲೇಬೇಕು ಎನ್ನುವ ಛಲದೊಂದಿಗೆ ಕಠಿಣ ಪರಿಶ್ರಮ ತೋರಿದಲ್ಲಿ ಯಾವುದು ಅಸಾಧ್ಯವಲ್ಲ ಎಂದು ಸಾನಿಯಾ ಮಿರ್ಜಾ ಕಿವಿಮಾತು ಹೇಳಿದ್ದಾರೆ.
 
ಹೈದ್ರಾಬಾದ್ ಮೂಲದ ಸಾನಿಯಾ ಮಿರ್ಜಾಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments