ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಶಾಟ್ ಪುಟರ್ ಇಂದರ್‌ಜೀತ್ ಫೇಲ್

Webdunia
ಮಂಗಳವಾರ, 26 ಜುಲೈ 2016 (11:44 IST)
ನರಸಿಂಗ್ ಯಾದವ್ ಅವರನ್ನು ಉದ್ದೀಪನ ಮದ್ದು ಸೇವನೆಯ ಆರೋಪದ ಮೇಲೆ ಒಲಿಂಪಿಕ್ಸ್‌ನಿಂದ ನಿಷೇಧಿಸಿದ ಹಗರಣದ ಬೆನ್ನಲ್ಲೇ ರಿಯೊಗೆ ತೆರಳುತ್ತಿದ್ದ ಶಾಟ್ ಪುಟರ್ ಇಂದರ್‌‍ಜೀತ್ ಸಿಂಗ್ ನಿಷೇಧಿತ ವಸ್ತುವಿನ ಪರೀಕ್ಷೆಯಲ್ಲಿ ಫೇಲ್ ಆಗಿದ್ದು, ಒಲಿಂಪಿಕ್ಸ್‌ನಿಂದ ನಿಷೇಧಿಸುವ ಸಾಧ್ಯತೆಯಿದೆ. 
 
 28 ವರ್ಷದ ಇಂದರ್‌ಜೀತ್ ಜೂನ್ 22ರಂದು ನಡೆದ ಪರೀಕ್ಷೆಯಲ್ಲಿ ನಿಷೇಧಿತ ಸ್ಟೆರಾಯ್ಡ್ ಬಳಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದಾರೆ. 
 
ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯು ಅಥ್ಲೆಟಿಕ್ಸ್ ಒಕ್ಕೂಟಕ್ಕೆ ಪತ್ರ ಬರೆದು ಇಂದ್ರಜಿತ್ ಡೋಪ್ ಟೆಸ್ಟ್‌ನಲ್ಲಿ ಫೇಲ್ ಆಗಿದ್ದಾರೆಂದು ತಿಳಿಸಿರುವುದಾಗಿ ಮೂಲವೊಂದು ಹೇಳಿದೆ.

ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ, ಏಷ್ಯನ್ ಗ್ರಾಂಡ್ ಪ್ರಿಕ್ಸ್ ಮತ್ತು ವಿಶ್ವ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತ ಇಂದರ್‌ಜೀತ್ ರಿಯೊಗೆ ಅರ್ಹತೆ ಪಡೆದ ಮೊದಲ ಭಾರತೀಯ ಅಥ್ಲೀಟ್ ಆಗಿದ್ದರು.  ಇಂದರ್‌ಜೀತ್ ಪೆನ್ಸಿಲ್‌ವೇನಿಯಾದಲ್ಲಿ ಅಮೆರಿಕದ ತರಬೇತಿ ಸಂದರ್ಭದಲ್ಲಿ ಪ್ರದರ್ಶನ ವರ್ಧಿಸುವ ನಿಷೇಧಿತ ಔಷಧಿಯನ್ನು ಸೇವಿಸಿರಬಹುದೆಂದು ಭಾವಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments