Webdunia - Bharat's app for daily news and videos

Install App

ಒಲಿಂಪಿಕ್ಸ್ ತೆರಳುತ್ತಿರುವ ರಾಜ್ಯದ 9 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ

Sampriya
ಭಾನುವಾರ, 21 ಜುಲೈ 2024 (10:19 IST)
Photo Courtesy X
ಬೆಂಗಳೂರು: ಇದೇ 26ರಂದು ಆರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ತಲಾ ₹ 5 ಲಕ್ಷ ಪ್ರೋತ್ಸಾಹ ಧನವನ್ನು ಘೋಷಣೆ ಮಾಡಿದೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್‌ನಲ್ಲಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಬೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ. ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಭಾರತ ಟೆಸ್ಟ್ ತಂಡದಲ್ಲಿ ಕನ್ನಡಿಗರಿಗೆ ಖುಲಾಯಿಸಿದ ಅದೃಷ್ಟ: ರಾಹುಲ್‌, ಕರುಣ್‌, ಪ್ರಸಿದ್ಧಗೆ ಮಣೆ ಹಾಕಿದ ಬಿಸಿಸಿಐ

Shubman Gill: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಶುಬ್ಮನ್ ಗಿಲ್ ಕ್ಯಾಪ್ಟನ್: ಫುಲ್ ಟೀಂ ಲಿಸ್ಟ್ ಇಲ್ಲಿದೆ

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

ಮುಂದಿನ ಸುದ್ದಿ
Show comments