ಟೆನಿಸ್ ಟೂರ್ನಿ: ಕನ್ನಡಿಗ ರೋಹನ್‌- ಎಬ್ಡೆನ್‌ ಜೋಡಿಗೆ ಮತ್ತೊಂದು ಕಿರೀಟ

Sampriya
ಭಾನುವಾರ, 31 ಮಾರ್ಚ್ 2024 (14:13 IST)
Photo Courtesy X
ಅಮೆರಿಕ: ಭಾರತದ ಟಿನಿಸ್‌ ಆಟಗಾರ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಜೋಡಿಯು ಮಯಾಮಿ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಡಬಲ್ಸ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಫೈನಲ್‌ನಲ್ಲಿ ಕನ್ನಡಿಗ ರೋಹನ್‌ ಮತ್ತು ಎಬ್ಡೆನ್ ಜೋಡಿ ಕ್ರೊರೇಷಿಯಾದ ಇವಾನ್ ಡೊಡಿಗ್ ಮತ್ತು ಅಮೆರಿಕದ ಆಸ್ಟಿನ್ ಕ್ರಾಜಿಕ್ ಅವರನ್ನು  6-7(3) 6-3 (10-6) ಸೆಟ್‌ಗಳಿಂದ ಸೋಲಿಸಿ ಚಾಂಪಿಯನ್‌ ಆಯಿತು.

ಈ ಜೋಡಿ ಸೆಮಿಫೈನಲ್ ಹಣಾಹಣಿಯಲ್ಲಿ ಸ್ಪೇನ್‌ನ ಮಾರ್ಸೆಲ್ ಗ್ರಾನೊಲ್ಲರ್ಸ್‌ ಮತ್ತು ಅರ್ಜೆಂಟೀನಾದ ಹೊರಾಸಿಯೊ ಜಿಬಾಲ್ಲೋಸ್‌ ಅವರನ್ನು ನೇರ ಸೆಟ್‌ಗಳಿಂದ ಹಿಮ್ಮೆಟ್ಟಿಸಿ ಫೈನಲ್‌ ಪ್ರವೇಶಿಸಿತ್ತು.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ರೋಹನ್‌, ಈ ಗೆಲುವಿನ ಮೂಲಕ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ. ಆಸ್ಟ್ರೇಲಿಯನ್ ಓಪನ್ ಗೆಲುವಿನ ನಂತರ, 44 ವರ್ಷದ ಬೋಪಣ್ಣ ಎಟಿಪಿ ಶ್ರೇಯಾಂಕದಲ್ಲಿ ವಿಶ್ವದ ನಂ.1 ಸ್ಥಾನಕ್ಕೆ ಏರಿದ್ದರು.

ಬೋಪಣ್ಣ ಪಾಲಿಗೆ ಇದು 14ನೇ ಎಟಿಪಿ ಮಾಸ್ಟರ್ಸ್ ಫೈನಲ್ ಹಾಗೂ ಮಯಾಮಿಯಲ್ಲಿ ನಡೆದ ಮೊದಲ ಫೈನಲ್ ಪಂದ್ಯವಾಗಿತ್ತು.  ಅವರು ಈವರೆಗೆ 25 ಡಬಲ್ಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments