ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

ಶನಿವಾರ, 1 ಆಗಸ್ಟ್ 2020 (12:19 IST)
ನವದೆಹಲಿ: ಈ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಮಾಡುವ ಸಮಿತಿಯಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸ್ಥಾನ ಪಡೆದಿದ್ದಾರೆ.


ಕೇಂದ್ರ ಕ್ರೀಡಾ ಸಚಿವಾಲಯ ಕ್ರೀಡಾ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರೂಪಿಸಿದ್ದು, ಇದಕ್ಕೆ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಮುಕುಂದಕಮ್ ಶರ್ಮಾ ಮುಖ್ಯಸ್ಥರಾಗಿದ್ದಾರೆ.

ಸಮಿತಿಯಲ್ಲಿ ಕ್ರಿಕೆಟ್ ಕ್ಷೇತ್ರದಿಂದ ಸೆಹ್ವಾಗ್ ಪ್ರತಿನಿಧಿಯಾಗಿದ್ದಾರೆ. ಉಳಿದಂತೆ ವಿವಿಧ ಕ್ರೀಡಾ ಕ್ಷೇತ್ರದ ತಜ್ಞರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಗನ ಫೋಟೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ