Webdunia - Bharat's app for daily news and videos

Install App

ಆಸ್ಟ್ರೇಲಿಯಾಕ್ಕೆ ಸ್ಕಾಟ್ಲೆಂಡ್ ವಿರುದ್ಧ ರೋಚಕ ಜಯ: ಸೂಪರ್‌ ಎಂಟರ ಘಟ್ಟಕ್ಕೆ ಇಂಗ್ಲೆಂಡ್‌

Sampriya
ಭಾನುವಾರ, 16 ಜೂನ್ 2024 (10:56 IST)
Photo Courtesy X
ಅಮೆರಿಕ: ಆಸ್ಟ್ರೇಲಿಯಾ ತಂಡವು ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಸ್ಕಾಟ್ಲೆಂಡ್ ವಿರುದ್ಧ ಐದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಸೋಲಿನೊಂದಿಗೆ ಸ್ಕಾಟ್ಲೆಂಡ್‌ ಟೂರ್ನಿಯಿಂದ ಹೊರಬಿದ್ದರೆ, ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವು ಸೂಪರ್‌ ಎಂಟರ ಘಟ್ಟಕ್ಕೆ ಪ್ರವೇಶ ಪಡೆದಿದೆ.

181 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೊನೆಯ ಓವರ್‌ನಲ್ಲಿ ಎರಡು ಎಸೆತಗಳು ಬಾಕಿ ಉಳಿದಿರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಪ್ರಯಾಸದ ಗೆಲುವು ದಾಖಲಿಸಿತು.


'ಬಿ' ಗುಂಪಿನಲ್ಲಿ ಎಲ್ಲ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿರುವ ಆಸ್ಟ್ರೇಲಿಯಾ ಒಟ್ಟು ಎಂಟು ಅಂಕಗಳನ್ನು ಕಲೆ ಹಾಕಿದ್ದು, ಅಗ್ರಸ್ಥಾನಿಯಾಗಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ. ಇಂಗ್ಲೆಂಡ್ ಹಾಗೂ ಸ್ಕಾಟ್ಲೆಂಡ್ ಸಮಾನ ಐದು ಅಂಕಗಳನ್ನು ಪಡೆದಿವೆ. ಆದರೆ ಸ್ಕಾಟ್ಲೆಂಡ್‌ಗಿಂತಲೂ ಉತ್ತಮ ರನ್‌ರೇಟ್ ಕಾಯ್ದುಕೊಂಡಿರುವ ಇಂಗ್ಲೆಂಡ್‌ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದೆ.  

ಮೊದಲು ಬ್ಯಾಟಿಂಗ್ ನಡೆಸಿದ ಸ್ಕಾಟ್ಲೆಂಡ್ ಬ್ರಂಡನ್ ಮೆಕುಲೆನ್ (60) ಹಾಗೂ ನಾಯಕ ಬೆರಿಂಗ್ಟನ್ (42*) ಬಿರುಸಿನ ಆಟದ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 180 ರನ್‌ಗಳ ಸವಾಲನ ಮೊತ್ತ ಪೇರಿಸಿತ್ತು. ಟ್ರಾವಿಸ್ ಹೆಡ್ (68) ಹಾಗೂ ಸ್ಟೋಯಿನಿಸ್ ( 59) ಅವರ ಆಟದ ಬಲದಿಂದ ಆಸ್ಟ್ರೇಲಿಯಾ ಗೆಲುವು ಸಾಧಿಸಿತು.

ಇದಕ್ಕೂ ಮೊದಲು ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಡಿಯಲ್ಲಿ ಇಂಗ್ಲೆಂಡ್ ತಂಡವು ನಮೀಬಿಯಾ ವಿರುದ್ಧ 41 ರನ್ ಅಂತರದ ಗೆಲುವು ದಾಖಲಿಸಿ, ಸೂಪರ್‌ ಎಂಟರ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಈ ಪಂದ್ಯದ ಮಳೆಯಿಂದ ರದ್ದಾಗಿದ್ದರೆ ಇಂಗ್ಲೆಂಡ್‌ ತಂಡ ಟೂರ್ನಿಯಿಂದ ಹೊರಬೀಳುವ ಆತಂಕ ಎದುರಿಸಿತ್ತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments