ಭಾರತದ ತಂಡದ ಜರ್ಸಿಯನ್ನು ತುಂಬಾ ಮಿಸ್‌ ಮಾಡಿಕೊಂಡಿದ್ದೆ ಎಂದ ರಿಷಭ್‌ ಪಂತ್‌

sampriya
ಗುರುವಾರ, 30 ಮೇ 2024 (18:55 IST)
Photo By X
ಮುಂಬೈ:  ನವದೆಹಲಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಷಭ್ ಪಂತ್‌ ಒಂದೂವರೆ ವರ್ಷದ ಬಳಿಕ ಕೊನೆಗೂ ಭಾರತ ತಂಡಕ್ಕೆ ವಾಪಸಾಗಿದ್ದಾರೆ. ಟಿ20 ವಿಶ್ವಕಪ್‌ ಟೂರ್ನಿಗಾಗಿ ನ್ಯೂಯಾರ್ಕ್‌ಗೆ ತಂಡದೊಂದಿಗೆ ತೆರಳಿರುವ ಅವರು ಅಭ್ಯಾಸದಲ್ಲಿ ತೊಡಗಿದ್ದಾರೆ.

ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಎಡಗೈ ಬ್ಯಾಟರ್ ರಿಷಭ್ ಪಂತ್ ಮತ್ತೆ ಪುನರಾಗಮನ ಮಾಡುವ ಹೊಸ್ತಿಲಲ್ಲಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ್ದ ಅವರು ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಸಮವಸ್ತ್ರ ಧರಿಸಿ ಆಡುವುದೇ ವಿಭಿನ್ನ ಅನುಭವ. ಈ ಕ್ಷಣವನ್ನು ತುಂಬಾ ಮಿಸ್ ಮಾಡಿಕೊಂಡಿದ್ದೆ. ಈಗ ಉತ್ತಮ ಪ್ರದರ್ಶನ ನೀಡುವ ಭರವಸೆ ಮೂಡಿದೆ. ಮತ್ತೆ ತಂಡವನ್ನು ಸೇರಿಕೊಂಡಿರುವುದು ಅಪೂರ್ವ ಅನುಭವ ಎಂದು ಬಿಸಿಸಿಐ ಬಿಡುಗಡೆ ಮಾಡಿದ ವಿಡಿಯೊದಲ್ಲಿ ಪಂತ್‌ ಹೇಳಿದ್ದಾರೆ.

ಟ್ವೆಂಟಿ-20 ವಿಶ್ವಕಪ್‌ ಟೂರ್ನಿಯು ವೆಸ್ಟ್‌ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಜೂನ್ 5ರಂದು ಐರ್ಲೆಂಡ್ ಸವಾಲನ್ನು ಎದುರಿಸಲಿದೆ. ಇದಕ್ಕೂ ಮೊದಲು ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಲಿದೆ. ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments