Select Your Language

Notifications

webdunia
webdunia
webdunia
webdunia

ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಪಾಕ್‌ ಆಟಗಾರರಿಗೆ ಶಾಕ್‌: ವೇತನ ಕಡಿತಕ್ಕೆ ಮುಂದಾದ ಪಿಸಿಬಿ

ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಪಾಕ್‌ ಆಟಗಾರರಿಗೆ ಶಾಕ್‌: ವೇತನ ಕಡಿತಕ್ಕೆ ಮುಂದಾದ ಪಿಸಿಬಿ

Sampriya

ಇಸ್ಲಾಮಾಬಾದ್ , ಭಾನುವಾರ, 16 ಜೂನ್ 2024 (12:59 IST)
Photo Courtesy X
ಇಸ್ಲಾಮಾಬಾದ್‌: ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ತೋರಿ ಟೂರ್ನಿಯಿಂದ ಪಾಕಿಸ್ತಾನ ತಂಡದ ಆಟಗಾರರಿಗೆ ಮತ್ತೊಂದು ಆಘಾತ ಎದುರಾಗಿದೆ. ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ವಿಶ್ವಕಪ್‌ನಲ್ಲಿ ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು.

ಇದರಿಂದಾಗಿ ಕೊನೆಯ ಪಂದ್ಯ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡದ ವಿರುದ್ಧ ಮಾಜಿ ಆಟಗಾರರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಪ್ರದರ್ಶನ ತೋರುದಕ್ಕಿಂತ ಟೂರ್ನಿಯಲ್ಲಿ ಪಾಲ್ಗೊಳ್ಳದೇ ಇದ್ದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಮಾಜಿ ಕ್ರಿಕೆಟಿಗರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾಕ್ಕೆ ಸ್ಕಾಟ್ಲೆಂಡ್ ವಿರುದ್ಧ ರೋಚಕ ಜಯ: ಸೂಪರ್‌ ಎಂಟರ ಘಟ್ಟಕ್ಕೆ ಇಂಗ್ಲೆಂಡ್‌