Select Your Language

Notifications

webdunia
webdunia
webdunia
webdunia

ಟ್ವೆಂಟಿ 20 ವಿಶ್ವಕಪ್‌: ಇಂಗ್ಲೆಂಡ್‌ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆ ಹಾಕಿದ ಭಾರತ

T20 World Cup Cricket

Sampriya

ಗಯಾನಾ: , ಶುಕ್ರವಾರ, 28 ಜೂನ್ 2024 (02:22 IST)
Photo Courtesy X
ಗಯಾನಾ: ಭಾರತ ತಂಡವು ಗುರುವಾರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು 68 ರನ್‌ಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು.

ಮಳೆಯ ಅಡಚಣೆಯ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡವು ರೋಹಿತ್‌ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್‌ ಬಲದಿಂದ 7 ವಿಕೆಟ್‌ಗೆ  171  ರನ್‌ ಗಳಿಸಿತು.

172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್‌ ತಂಡವು ಎಡಗೈ ಸ್ಪಿನ್ ಜೋಡಿ ಅಕ್ಷರ್ ಪಟೇಲ್ (23ಕ್ಕೆ3) ಮತ್ತು ಕುಲದೀಪ್ ಯಾದವ್ (19ಕ್ಕೆ3) ಮೋಡಿಯ ಮುಂದೆ ಇಂಗ್ಲೆಂಡ್ ತಂಡವು ಕುಸಿಯಿತು. ಇಂಗ್ಲೆಂಡ್ 16.4 ಓವರ್‌ಗಳಲ್ಲಿ 103 ರನ್  ಗಳಿಸಿತು.  

ನಾಯಕ ರೋಹಿತ್‌ ಶರ್ಮಾ ಮತ್ತು ಸೂರ್ಯಕುಮಾರ್‌ ಯಾದವ್‌ ಕ್ರಮವಾಗಿ 57 ಮತ್ತು 47 ರನ್‌ಗಳಿಸಿ ಮಿಂಚಿದರು.  2020ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಿ ಇಂಗ್ಲೆಂಡ್‌ ಫೈನಲ್‌ ಪ್ರವೇಶಿಸಿತ್ತು. ಆ ಸೇಡನ್ನು ಭಾರತ ತೀರಿಸಿಕೊಂಡಿತು.
 

Share this Story:

Follow Webdunia kannada

ಮುಂದಿನ ಸುದ್ದಿ

ಟ್ವೆಂಟಿ 20 ವಿಶ್ವಕಪ್: ಭಾರತ- ಇಂಗ್ಲೆಂಡ್ ಸೆಮಿಫೈನಲ್‌ ಪಂದ್ಯಾಟಕ್ಕೆ ಮಳೆರಾಯ ಅಡ್ಡಿ