Select Your Language

Notifications

webdunia
webdunia
webdunia
webdunia

ವಿಶ್ವಕಪ್‌ ವಿಜೇತ ಭಾರತ ತಂಡದ ವಿಜಯೋತ್ಸವ: 11 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

T20 World Cup

Sampriya

ಮುಂಬೈ , ಶುಕ್ರವಾರ, 5 ಜುಲೈ 2024 (14:09 IST)
Photo Courtesy X
ಮುಂಬೈ:  ಟ್ವೆಂಟಿ ಕ್ರಿಕೆಟ್‌ ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ನಡೆಯಿತು. ಈ ವೇಳೆ ಲಕ್ಷಾಂತರ ಮಂದಿ ಸೇರಿದಿದ್ದರಿಂದ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ವರದಿಯಾಗಿವೆ.

ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗಾಯ ಮತ್ತು ಗುಂಪಿನಲ್ಲಿ ಉಸಿರಾಟ ಸಮಸ್ಯೆ ಉಂಟಾಗಿ 9 ಮಂದಿ ಜಿಟಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

ಒಬ್ಬರನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಬ್ಬರು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ಅಪಾರ ಪ್ರಮಾಣದ ಅಭಿಮಾನಿಗಳು ಮಳೆಯ ನಡುವೆಯೂ ತಮ್ಮ ನೆಚ್ಚಿನ ಆಟಗಾರರಿಗೆ ಶುಭಾಶಯ ತಿಳಿಸಿದರು.

ಕಳೆದ ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸಿದ್ದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅವಮಾನವಾದ ಜಾಗದಲ್ಲೇ ಸನ್ಮಾನ: ವಾಂಖೆಡೆಯಲ್ಲಿ ಭಾವುಕರಾಗಿದ್ದೇಕೆ ಹಾರ್ದಿಕ್ ಪಾಂಡ್ಯ