Publish Date: Fri, 05 Jan 2024 (10:02 IST)
Updated Date: Fri, 05 Jan 2024 (10:01 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಸ್ಪರ್ಧಿ ಡ್ರೋಣ್ ಪ್ರತಾಪ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಖಿನ್ನತೆಗೊಳಗಾಗಿದ್ದ ಡ್ರೋಣ್ ಪ್ರತಾಪ್ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ಸುದ್ದಿಯಾಗಿತ್ತು. ಆದರೆ ಬಳಿಕ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ, ಫುಡ್ ಪಾಯ್ಸನ್ ಆಗಿತ್ತು. ಅದರಿಂದಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಗ್ ಬಾಸ್ ಮೂಲಗಳಿಂದ ತಿಳಿದುಬಂದಿತ್ತು.
ಇದರ ಬೆನ್ನಲ್ಲೇ ಪೊಲೀಸರು ಬಿಗ್ ಬಾಸ್ ಮನೆಗೆ ಮತ್ತು ಡ್ರೋಣ್ ಪ್ರತಾಪ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಸದ್ಯಕ್ಕೆ ಪ್ರತಾಪ್ ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಶೀಘ್ರವೇ ಅವರು ಬಿಗ್ ಬಾಸ್ ಗೆ ವಾಪಸಾಗುವ ನಿರೀಕ್ಷೆಯಿದೆ.