ಬಿಬಿಕೆ10: ಬಿಗ್ ಬಾಸ್ ಗೆ ಬರ್ತಾರಾ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ?

Krishnaveni K
ಮಂಗಳವಾರ, 23 ಜನವರಿ 2024 (09:19 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಕೊನೆಯ ಹಂತಕ್ಕೆ ಬಂದಿದ್ದು, ಸ್ಪರ್ಧಿಗಳಿಗೆ ತಮ್ಮ ಆಸೆ ಏನೆಂದು ತಿಳಿಸಲು ಬಿಗ್ ಬಾಸ್ ಸೂಚಿಸಿದ್ದಾರೆ.

ಅದರಂತೆ ಎಲ್ಲಾ ಸ್ಪರ್ಧಿಗಳು ಈ ಮನೆಯಲ್ಲಿ ತಮ್ಮ ಆಸೆ ಏನು ಎಂಬುದನ್ನು ತಿಳಿಸಿದ್ದಾರೆ. ಆದರೆ ಆ ಪೈಕಿ ಸಂಗೀತಾ ಶೃಂಗೇರಿ ದೊಡ್ಡ ದೊಡ್ಡ ಆಸೆಗಳನ್ನೇ ಬಿಗ್ ಬಾಸ್ ಮುಂದೆ ತೆರೆದಿಟ್ಟಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಮತ್ತು ಕಿರಣ್ ರಾಜ್ ಮನೆಗೆ ಬಂದಿದ್ದರೆ ಚೆನ್ನಾಗಿರುತ್ತಿತ್ತು ಎಂದಿದ್ದಾರೆ. 777 ಚಾರ್ಲಿ ಸಿನಿಮಾದಲ್ಲಿ ಸಂಗೀತಾ ನಾಯಕಿಯಾಗಿದ್ದರು. ಹೀಗಾಗಿ ಅದೇ ಸ್ನೇಹದಿಂದ ಈ ಮೂವರನ್ನೂ ನೋಡುವ ಬಯಕೆಯನ್ನು ಹೊರಹಾಕಿದ್ದಾರೆ. ಅಷ್ಟೇ ಅಲ್ಲ, ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಂದ ಒಂದು ಸ್ಪೂರ್ತಿಯುತ ಸಂದೇಶ ಬಂದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳಿದ್ದಾರೆ. ಆದರೆ ಈ ಆಸೆಗಳನ್ನು ಬಿಗ್ ಬಾಸ್ ನೆರವೇರಿಸುತ್ತಾ ಕಾದು ನೋಡಬೇಕು.

ಆದರೆ ಮನೆಯ ಇತರೆ ಸದಸ್ಯರು ಸರಳವಾದ ಆಸೆಗಳನ್ನೇ ತೆರೆದಿಟ್ಟರು. ಕಾರ್ತಿಕ್ ತಮ್ಮ ಸಹೋದರಿ ಜೊತೆ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿಕೊಂಡರೆ  ವಿನಯ್ ಮನೆಯವರೆಲ್ಲರ ಮೀಮ್ಸ್ ನೋಡುವ ಆಸೆ ವ್ಯಕ್ತಪಡಿಸಿದರು. ತುಕಾಲಿ ಸಂತೋಷ್ ಉಂಡೆಕೋಳಿ ತಿನ್ನಬೇಕು ಎಂದರು. ಡ್ರೋಣ್ ಪ್ರತಾಪ್ ಐದು ನಿಮಿಷವಾದರೂ ಮನೆಯ ಕ್ಯಾಪ್ಟನ್ ಆಗಲು ಅವಕಾಶ ಕೊಡಿ ಎಂದು ಬೇಡಿಕೆಯಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments